
ಕೊಪ್ಪಳ ಬಳಿ ಭೀಕರ ಅಪಘಾತ: ಬರ್ತಡೇ ಮುಗಿಸಿ ಹೊರಟ ಒಂದೇ ಕುಟುಂಬದ ಐವರು ಸಾವು
ಹುಟ್ಟುಹಬ್ಬದ ಪಾರ್ಟಿ ಮುಗಿಸಿಕೊಂಡು ವಾಪಸ್ ಬರುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಕೊಪ್ಪಳದ ಭಾನಾಪುರ ಬಳಿ ಸಂಭವಿಸಿದೆ.
ಕೊಪ್ಪಳ (ಜು. 24): ಹುಟ್ಟುಹಬ್ಬದ ಪಾರ್ಟಿ (Birthday Party) ಮುಗಿಸಿಕೊಂಡು ವಾಪಸ್ ಬರುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಕೊಪ್ಪಳದ ಭಾನಾಪುರ ಬಳಿ ಸಂಭವಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಆಂಧ್ರ ಪ್ರದೇಶದ ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ: ಮೂವರು ಪೊಲೀಸರ ಸಾವು
ಕುಕನೂರು ತಾಲೂಕಿನ ಭಾನಾಪುರ ಸಮೀಪ ಟಾಟಾ ಸ್ಕಾರ್ಪಿಯೋಗೆ ಲಾರಿಯೊಂದು ಡಿಕ್ಕಿಯಾಗಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಹುಬ್ಬಳ್ಳಿಯಿಂದ ಕೊಪ್ಪಳಕ್ಕೆ ಬರುತ್ತಿದ್ದ ಸ್ಕಾರ್ಪಿಯೋಗೆ ಲಾರಿಯೊಂದು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಮೃತರೆಲ್ಲ ಯಲಬುರ್ಗಾ ತಾಲೂಕಿನ ಬಿನ್ನಾಳ ಗ್ರಾಮದ ಒಂದೇ ಕುಟುಂಬಕ್ಕೆ ಸೇರಿದವರು. ಹುಟ್ಟುಹಬ್ಬದ ಪಾರ್ಟಿ ಮುಗಿಸಿಕೊಂಡು ವಾಪಸ್ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಡಿಕ್ಕಿ ಹೊಡೆದ ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.