ಗಾಳಿಪಟದ‌ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ 6 ವರ್ಷದ ಬಾಲಕ ಸಾವು!

ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಐದು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬೆಳಗಾವಿಯ ಗಾಂಧಿನಗರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.

First Published Oct 24, 2022, 8:30 PM IST | Last Updated Oct 24, 2022, 8:30 PM IST

ಬೆಳಗಾವಿ: ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಐದು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬೆಳಗಾವಿಯ ಗಾಂಧಿನಗರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಹುಕ್ಕೇರಿ ತಾಲೂಕಿನ ಯಮಕನಮರಡಿ ಸಮೀಪದ ಅನಂತಪುರ ಗ್ರಾಮದ ವರ್ಧನ ಈರಣ್ಣ ಬ್ಯಾಳಿ ಮೃತ ಬಾಲಕ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬಟ್ಟೆಖರೀದಿಸಿ ವಡಗಾವಿಯ ಮಾವನ ಮನೆÜಗೆ ಭೇಟಿಕೊಟ್ಟು, ಮರಳಿ ದ್ವಿಚಕ್ರ ವಾಹನದ ಮೇಲೆ ತಮ್ಮ ತಂದೆಯೊಂದಿಗೆ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಮಾಂಜಾ ದಾರ ಕೊರಳಿಗೆ ಸಿಲುಕಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. 

BENGALURU: ಡಿವೈಡರ್ ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಬೈಕ್ ಸವಾರ ಭೀಕರ ಅಂತ್ಯ

ಬಾಲಕ ಬೈಕ್‌ ಮುಂಭಾಗದಲ್ಲಿ ಪೆಟ್ರೋಲ್‌ ಟ್ಯಾಂಕ್‌ ಮೇಲೆ ಕುಳಿತಿದ್ದನು ಎಂದು ತಿಳಿದುಬಂದಿದ್ದು, ಮಾಂಜಾದಾರ ಬಾಲಕನ ಕೊರಳಿಗೆ ನೇರವಾಗಿ ಸುತ್ತಿಕೊಂಡಿದ್ದರಿಂದ ಆತನ ಕುತ್ತಿಗೆಗೆ ತೀವ್ರ ಗಾಯವಾಗಿ ಬಾಲಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಮುಂಚೆಯೂ ಗಾಜಿನಪುಡಿ ಲೇಪಿತ ಮಾಂಜಾದಾರ ಹಲವು ಅವಘಡಗಳಿಗೆ ಕಾರಣವಾಗಿದ್ದು, ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆ ಮಾಂಜಾದಾರವನ್ನು ಕಟ್ಟಿನಿಟ್ಟಾಗಿ ನಿಷೇಧಿಸಿ, ಕಾಳಸಂತೆಯಲ್ಲಿ ಅದನ್ನು ಮಾರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Video Top Stories