Asianet Suvarna News Asianet Suvarna News

ಬೆಂಗಳೂರು ಡಿಸಿ ಕಚೇರಿ ಮೇಲೆ ಎಸಿಬಿ ದಾಳಿ, ಲಂಚ ಸ್ವೀಕರಿಸುತ್ತಿದ್ದಾಗ ಅರೆಸ್ಟ್

ಬೆಂಗಳೂರು ಡಿಸಿ ಕಚೇರಿ ಮೇಲೆ ಎಸಿಬಿ ದಾಳಿ ಮಾಡಿದ್ದು,  ಜಿಲ್ಲಾಧಿಕಾರಿ ಮಂಜುನಾಥ್ ಕಚೇರಿಯಲ್ಲಿ ಕೆಲಸ ಮಾಡೋ ಮ್ಯಾನೇಜರ್​​​ ಮಹೇಶ್​​​ 5 ಲಕ್ಷ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. 

ಬೆಂಗಳೂರು, (ಮೇ.21):  ಬೆಂಗಳೂರು ಡಿಸಿ ಕಚೇರಿ ಮೇಲೆ ಎಸಿಬಿ ದಾಳಿ ಮಾಡಿದ್ದು,  ಜಿಲ್ಲಾಧಿಕಾರಿ ಮಂಜುನಾಥ್ ಕಚೇರಿಯಲ್ಲಿ ಕೆಲಸ ಮಾಡೋ ಮ್ಯಾನೇಜರ್​​​ ಮಹೇಶ್​​​ 5 ಲಕ್ಷ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. 

ಈಗ ಜಿಲ್ಲಾಧಿಕಾರಿ ಕಚೇರಿಯಲ್ಲೇ ಬೀಡು ಬಿಟ್ಟಿರೋ 6 ಜನ ಎಸಿಬಿ ಅಧಿಕಾರಿಗಳ ತಂಡ 30 ನಿಮಿಷಗಳಿಂದ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಡಿಸಿ ಮಂಜುನಾಥ್ ಮಹೇಶ್​​​ ಮೂಲಕ 5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರುದಾರ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇರೆಗೆ ಎಸಿಬಿ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಆಗ ಮಹೇಶ್​​ ದೂರುದಾರನಿಂದ 5 ಲಕ್ಷ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ​

Video Top Stories