Asianet Suvarna News Asianet Suvarna News

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ವಿಚಾರಣೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಸೂಚನೆ

ಪಾಕಿಸ್ತಾನ್ ಜಿಂದಾಬಾದ್ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಮತ್ತೆ ವಿಚಾರಣೆಗೆ ಹಾಜರಾಗಲು 3 ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.
 

First Published Nov 19, 2022, 12:59 PM IST | Last Updated Nov 19, 2022, 12:59 PM IST

ಬೆಂಗಳೂರು (ನ.19):ಬೆಂಗಳೂರಿನಲ್ಲಿ ಮೂವರು ವಿದ್ಯಾರ್ಥಿಗಳು ಕಾಲೇಜಿನಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಉದ್ದೇಶಪೂರ್ವಕವಾಗಿ ಕೂಗಿಲ್ಲ ಎಂದು ಪ್ರಾಥಮಿಕ ತನಿಖೆಯಲ್ಲಿ ಸಾಬೀತಾಗಿದೆ. ಹೀಗಾಗಿ ಈ ಹಿನ್ನೆಲೆ ವಿಚಾರಣೆ ಮಾಡಿ ಪೊಲೀಸರು ಕಳುಹಿಸಿದ್ದಾರೆ. ಇಂದು ಮತ್ತೆ ವಿಚಾರಣೆಗೆ ಹಾಜರಾಗಲು 3 ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದ್ದು, ಘಟನೆ ಸಂಬಂಧ 2 ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 153 ಜನಾಂಗೀಯ ದ್ವೇಷಕ್ಕೆ ಪ್ರಚೋದನೆ. ಹಾಗೂ ಐಪಿಸಿ ಸೆಕ್ಷನ್ 505(1)B ಸಾರ್ವಜನಿಕರಲ್ಲಿ ಭಯ ಉಂಟು ಮಾಡುವುದು ದೇಶದ ವಿರುದ್ಧ ಕೆಲಸ ಮಾಡಲು ವ್ಯಕ್ತಿಯನ್ನು ಪ್ರಚೋದಿಸುವುದಾಗಿದೆ. 2 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ವಿಚಾರಣೆ ನಡೆಸಿದ್ದಾರೆ.

PSI Recruitment Scam: 12 ಜನ ಆರೋಪಿಗಳಿಗೆ ಜಾಮೀನು ಮಂಜೂರು‌