Asianet Suvarna News Asianet Suvarna News

Suvarna FIR: ಸ್ಟುಡೆಂಟ್ ಕೊಟ್ಟ ಕ್ಲೂ, ಸೂಪರ್ ಕಾಪ್ಸ್ ರೋಚಕ ಕಾರ್ಯಾಚರಣೆ, ಆ್ಯಸಿಡ್‌ ನಾಗ ಅರೆಸ್ಟ್.!

ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಬೆಂಗಳೂರಿನಲ್ಲಿ ಆ್ಯಸಿಡ್‌ ದಾಳಿ (Acid Attack)ನಡೆಸಿ, ತಮಿಳುನಾಡಿನ  (Tamilnadu) ಆಶ್ರಮವೊಂದರಲ್ಲಿ ಕಾವಿಧಾರಿ ವೇಷದಲ್ಲಿ ತಲೆಮರೆಸಿಕೊಂಡಿದ್ದ ಕಿಡಿಗೇಡಿಯನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. 

ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಬೆಂಗಳೂರಿನಲ್ಲಿ ಆ್ಯಸಿಡ್‌ ದಾಳಿ (Acid Attack)ನಡೆಸಿ, ತಮಿಳುನಾಡಿನ  (Tamilnadu) ಆಶ್ರಮವೊಂದರಲ್ಲಿ ಕಾವಿಧಾರಿ ವೇಷದಲ್ಲಿ ತಲೆಮರೆಸಿಕೊಂಡಿದ್ದ ಕಿಡಿಗೇಡಿಯನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.  ತಮಿಳುನಾಡಿನ ತಿರುವಣ್ಣಾಮಲೈನ ಶಿವನ ದೇವಾಲಯವಿರುವ ರಮಣ ಆಶ್ರಮದಲ್ಲಿ ಸ್ವಾಮೀಜಿ ಸೋಗಿನಲ್ಲಿ ಧ್ಯಾನ ಮಾಡುವಾಗಲೇ ಪೊಲೀಸರ ಬಲೆಗೆ ಬಿದ್ದಿದ್ದಾನೆ.

Bengaluru CRime:ಆ್ಯಸಿಡ್‌ ನಾಗನ ಸುಳಿವು ನೀಡಿದ ಕೈ ಗಾಯ..!

ಆ್ಯಸಿಡ್‌ ದಾಳಿ ಬಳಿಕ ತಲೆಮರೆಸಿಕೊಂಡಿದ್ದ ನಾಗೇಶ್‌ ಬಂಧನಕ್ಕೆ ಪೊಲೀಸರ 10 ವಿಶೇಷ ತಂಡ ರಚಿಸಿ ಕಾರ್ಯಾಚರಣೆ ಚುರುಕುಗೊಳಿಸಲಾಗಿತ್ತು. ಆರೋಪಿಯ ಬಗ್ಗೆ ಸಣ್ಣ ಸುಳಿವು ಸಿಗದ ಪರಿಣಾಮ ಕನ್ನಡ, ತೆಲುಗು, ತಮಿಳು, ಇಂಗ್ಲಿಷ್‌ ಭಾಷೆಯಲ್ಲಿ ಆರೋಪಿಯ ಭಾವಚಿತ್ರ ಸಹಿತ ಕರಪತ್ರ ಮುದ್ರಿಸಿ ನೆರೆಯ ತಮಿಳುನಾಡು, ಆಂಧ್ರಪ್ರದೇಶ, ಕೇರಳ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳ ಸಾರ್ವಜನಿಕ ಸ್ಥಳಗಳು, ದೇವಸ್ಥಾನಗಳು, ಆಶ್ರಯಮಗಳು, ಮಠಗಳು ಸೇರಿದಂತೆ ಸಾರ್ವಜನಿಕರು ಹೆಚ್ಚು ಸೇರುವ ಸ್ಥಳಗಳಲ್ಲಿ ಹಂಚಲಾಗಿತ್ತು.

Suvarna FIR:ಸ್ವಾಮೀಜಿ ವೇಷದಲ್ಲಿ ತಲೆ ಮರೆಸಿಕೊಂಡಿದ್ದ ಪಾಗಲ್ ಪ್ರೇಮಿ ಅರೆಸ್ಟ್

ಪೊಲೀಸರ ಒಂದು ತಂಡ ಗುರುವಾರ ತಮಿಳುನಾಡಿನ ತಿರುವಣ್ಣಾಮಲೈಯಲ್ಲಿ ಶಿವನ ದೇವಾಲಯವಿರುವ ರಮಣ ಆಶ್ರಮದಲ್ಲಿಯೂ ಕರಪತ್ರ ಹಂಚಿತ್ತು. ಈ ಕರಪತ್ರದಲ್ಲಿ ಮುದ್ರಿತವಾಗಿದ್ದ ಭಾವಚಿತ್ರ ಗಮನಿಸಿದ್ದ ಸ್ಥಳೀಯರು ಕೆಲ ದಿನಗಳಿಂದ ಆಶ್ರಮದಲ್ಲಿ ಕಾವಿಧಾರಿಯಾಗಿ ಇರುವ ನಾಗೇಶ್‌ನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈ ಮಾಹಿತಿ ಆಧರಿಸಿ ಪೊಲೀಸರು ಸಂಜೆ ಭಕ್ತರ ಸೋಗಿನಲ್ಲಿ ಆಶ್ರಮಕ್ಕೆ ತೆರಳಿ ಕಾವಿಧಾರಿಯಾಗಿದ್ದ ನಾಗೇಶ್‌ನ ಚಲನವಲನದ ಮೇಲೆ ನಿಗಾವಹಿಸಿದ್ದರು. ಬಳಿಕ ಆಶ್ರಮದ ಮೇಲ್ವಿಚಾರಕರನ್ನು ಸಂಪರ್ಕಿಸಿ ನಾಗೇಶ್‌ನ ಬಗ್ಗೆ ವಿಚಾರಿಸಿದ್ದಾರೆ. ಬಳಿಕ ಆರೋಪಿಯನ್ನು ವಶಕ್ಕೆ ಪಡೆದು ಕಾವಿಬಟ್ಟೆಕಳಚಿಸಿ ವಿಚಾರಣೆ ಮಾಡಿದಾಗ ನಾಗೇಶನ್‌ ನಿಜ ಸ್ವರೂಪ ಬೆಳಕಿಗೆ ಬಂದಿದೆ.
 

Video Top Stories