
ಡಿಜೆ ಹಳ್ಳಿ ಗಲಭೆ: ಪ್ರಮುಖ ಆರೋಪಿ, ಎಸ್‌ಡಿಪಿಐ ಮುಖಂಡ ಅರೆಸ್ಟ್
- ಬೆಂಗಳೂರಿನ ಡಿಜೆ ಹಳ್ಳಿ- ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ನಡೆದಿದ್ದ ಗಲಭೆ
- ಎಸ್‌ಡಿಪಿಐ ಮುಖಂಡ ಮುಜಾಮಿಲ್ ಪಾಶಾ ವಿರುದ್ಧ ಕುಮ್ಮಕ್ಕು ನೀಡಿರುವ ಆರೋಪ
- ಉದ್ವಿಗ್ನತೆಗೆ ಕಾರಣವಾಗಿದ್ದ ಶಾಸಕ ಅಖಂಡ ಶ್ರೀನಿವಾಸ್‌ಮೂರ್ತಿ ಅಳಿಯನ ಧಾರ್ಮಿಕ ಅವಹೇಳನಕಾರಿ ಪೋಸ್ಟ್
ಬೆಂಗಳೂರು (ಆ.13): ಬೆಂಗಳೂರಿನ ಡಿಜೆ ಹಳ್ಳಿ- ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ, ಎಸ್‌ಡಿಪಿಐ ಮುಖಂಡ ಮುಜಾಮಿಲ್ ಪಾಶಾನನ್ನು ಪೊಲೀಸರು ಬಂಧಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪಾಶಾ ವಿರುದ್ಧ ಗಲಭೆಗೆ ಕುಮ್ಮಕ್ಕು ನೀಡಿರುವ ಆರೋಪವಿದ್ದು, ಆತನನ್ನು ರಾತ್ರಿಯೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ವಿಚಾರಣೆಗಾಗಿ ಪಾಶಾನನ್ನು 5 ದಿನಗಳ ಅವಧಿಗೆ ಪೊಲೀಸ್ಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ನೋಡಿ | ಡಿಜೆ ಹಳ್ಳಿ ಗಲಭೆ ಹೊಣೆಯನ್ನು ಪೊಲೀಸರ ತಲೆಗೆ ಕಟ್ಟಿದ SDPI...
ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್‌ಮೂರ್ತಿಯ ಅಳಿಯನ ಧಾರ್ಮಿಕ ಅವಹೇಳನಕಾರಿ ಪೋಸ್ಟ್ ವಿರುದ್ಧ ಶುರುವಾದ ಪ್ರತಿಭಟನೆ ವಿಕೋಪಕ್ಕೆ ತಿರುಗಿ, ಪೊಲೀಸ್ ಫೈರಿಂಗ್‌ನಲ್ಲಿ ಮೂವರು ಸಾವನ್ನಪ್ಪಿದ್ದರು.