ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿನಿ ಸಾವು: ಶಿಕ್ಷಕರೇ ಕಾರಣ ಎಂದು ಪೋಷಕರ ಆರೋಪ

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ನಿಶಿತಾ ನಿನ್ನೆ ಮೃತಪಟ್ಟಿದ್ದರು. ಈ ಸಂಬಂಧ ಪೊಲೀಸರು ಕ್ಲಾಸ್‌ರೂಂನ ಸಿಸಿಟಿವಿ ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣ ವರದಿಯಾಗಿದೆ. ಗಂಗಮ್ಮನಗುಡಿಯ ಆರ್‌.ಡಿ. ಇಂಟರ್‌ನ್ಯಾಷನಲ್‌ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ಶಿಕ್ಷಕರಿಂದಲೇ ಮಗು ಸಾವು ಅಂತ ಪೋಷಕರು ಆರೋಪಿಸಿದ್ದಾರೆ. ಇನ್ನು, ಬಾಲಕಿ ಸಾವು ಬೆನ್ನಲ್ಲೇ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಆ ಖಾಸಗಿ ಶಾಲೆಯ ಕ್ಲಾಸ್‌ರೂಮ್‌ನ ಸಿಸಿಟಿವಿ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ಶಾಲೆಯಲ್ಲಿ ವಿದ್ಯಾರ್ಥಿನಿ ನಿಶಿತಾ ಮೃತಪಟ್ಟಿದ್ದರು. ಇನ್ನು, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಸತ್ಯತೆ ಬಹಿರಂಗವಾಗಬೇಕಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video