
Bidar: ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಮಾರಾಮಾರಿ: ನಾಲ್ವರಿಗೆ ಗಾಯ, ಒಬ್ಬನ ಸ್ಥಿತಿ ಚಿಂತಾಜನಕ
ಬೀದರ್‌ನ ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ.
ಬೀದರ್ (ಮಾ.24): ಇಲ್ಲಿನ ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಎರಡು ಗುಂಪುಗಳು ಖಾರದ ಪುಡಿ ಎರಚಿ ಆಸ್ಪತ್ರೆಯ ಉಪಕರಣಗಳಿಂದ ಹೊಡೆದಾಡಿಕೊಂಡಿದ್ದಾರೆ. ಕಾಂಗ್ರೆಸ್‌ನ ಜಿ.ಪಂ. ಮಾಜಿ ಸದಸ್ಯ ಫಿರೋಜ್ ಖಾನ್ ಮತ್ತು ಅವರ ಮಕ್ಕಳ ಮೇಲೆ ಹಲ್ಲೆ ನಡೆದಿದೆ. ಹಣಕಾಸು ವಿಚಾರವಾಗಿ ಯುವಕರ ಗುಂಪು ಹಲ್ಲೆ ನಡೆಸಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ರೌಫ್, ಫಿರೋಜ್ ಖಾನ್, ಅಫ್ಸರ್ ಖಾನ್, ಅರ್ಬಾಜ್ ಖಾನ್ ಮತ್ತು ಅಜ್ಜುಗೆ ಗಾಯಗಳಾಗಿವೆ. ಅಜ್ಜುಗೆ ಗಂಭೀರ ಗಾಯಗಳಾಗಿವೆ. ನ್ಯೂ ಟೌನ್ ಹಾಗೂ ಟೌನ್ ಪೋಲಿಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸೆಕ್ಷನ್ 307, 353 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.