
ಸುರಪುರ ಉಪಚುನಾವಣೆಗೆ ಮತದಾನ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಪರಸ್ಪರ ಕಲ್ಲು ತೂರಾಟ
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ.
ಯಾದಗಿರಿ: ಸುರಪುರ ಉಪಚುನಾವಣೆಗೆ ಮತದಾನ ಹಿನ್ನೆಲೆ ಬಿಜೆಪಿ(BJP)-ಕಾಂಗ್ರೆಸ್(Congress) ಕಾರ್ಯಕರ್ತರ ಮಧ್ಯೆ ಪರಸ್ಪರ ಕಲ್ಲು ತೂರಾಟ ನಡೆಸಲಾಗಿದೆ. ಕಲ್ಲು ತೂರಾಟದ(Pelted stones) ವೇಳೆ ಓರ್ವನ ತಲೆಗೆ ಗಂಭೀರ ಗಾಯವಾಗಿದೆ. ಯಾದಗಿರಿ( Yadgir) ಜಿಲ್ಲೆಯ ಸುರಪುರ ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮತದಾನದ(Voting) ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದ್ದು, ಈ ವೇಳೆ ಪರಸ್ಪರ ಕಲ್ಲು ತೂರಾಟವನ್ನು ಕಾರ್ಯಕರ್ತರು ನಡೆಸಿದ್ದಾರೆ. ಕಲ್ಲು ತೂರಾಟ ಹಿನ್ನೆಲೆ ಗ್ರಾಮದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: ಗುಜರಿ ಸೇರಬೇಕಿದ್ದ ರೈಲ್ವೇ ಬೋಗಿ ಇಂದು ಹೈಟೆಕ್ ರೆಸ್ಟೋರೆಂಟ್! ಸಿಟಿಮಂದಿ ಫುಲ್ ಫಿದಾ!