Yediyurappa House Attack: ಬಿಜೆಪಿಯವರದ್ದೇ ಕೈವಾಡ ಇರಬಹುದು ಎಂದ ಸಿದ್ದರಾಮಯ್ಯ!
ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಿರುವುದರ ಹಿಂದೆ ಬಿಜೆಪಿಯದೇ ಕೈವಾಡ ಇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಬೆಂಗಳೂರು (ಮಾ.28): ಒಳಮೀಸಲಾತಿ ವಿರೋಧಿಸಿ ಮಾರ್ಚ್ 27ರಂದು ಯಡಿಯೂರಪ್ಪ ಅವರ ಶಿಕಾರಿಪುರ ಮನೆ ಮೇಲೆ ಕಲ್ಲು ತೂರಾಟ ನಡೆದ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಿರುವುದರ ಹಿಂದೆ ಬಿಜೆಪಿಯದೇ ಕೈವಾಡ ಇರಬಹುದು. ಈ ಬಗ್ಗೆ ಯಡಿಯೂರಪ್ಪ ಅವರೇ ಬಂಜಾರ ಸಮುದಾಯದ ಜನ ತಪ್ಪು ಗ್ರಹಿಕೆಯಿಂದ ಕಲ್ಲು ತೂರಾಟ ಮಾಡಿದ್ದಾರೆ ಎಂದಿದ್ದಾರೆ. ಮೀಸಲಾತಿ ಬಗ್ಗೆ ಈ ಹಿಂದಿನಿಂದಲೂ ಬಂಜಾರ ಜನಾಂಗ ವಿರೋಧ ಪಡಿಸುತ್ತಾ ಬಂದಿದೆ ಎಂದಿದ್ದಾರೆ.