Asianet Suvarna News Asianet Suvarna News

ಬೆಂಗಳೂರು ತರಗುಪೇಟೆಯಲ್ಲಿ ನಿಗೂಢ ಸ್ಫೋಟ: ಮೂವರು ಸಾವು, ಗಾಯಾಳುಗಳ ಸ್ಥಿತಿ ಗಂಭೀರ

Sep 23, 2021, 3:21 PM IST

ಬೆಂಗಳೂರು (ಸೆ. 23):  ಚಾಮರಾಜಪೇಟೆಯ ತರಗುಪೇಟೆಯಲ್ಲಿ  ನಿಗೂಢ ಸ್ಫೋಟ ಸಂಭವಿಸಿದ್ದು ಮೂವರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರ್ವೀಸ್‌ ಗೋಡೌನ್‌ನಲ್ಲಿಟ್ಟಿದ್ದ ಪಟಾಕಿಗಳು ಸ್ಫೋಟಿಸಿರುವ ಸಾಧ್ಯತೆ ಎನ್ನಲಾಗುತ್ತಿದೆ. ಗೋದಾಮು ಮಾಲಿಕ ಬಾಬುರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆಯಲ್ಲಿ 10 ಕ್ಕೂ ಹೆಚ್ಚು ಬೈಕ್‌ಗಳು ಜಖಂ ಆಗಿದೆ. ಸ್ಫೋಟಗೊಂಡಿರುವ ಸ್ಥಳಕ್ಕೆ ಎಫ್‌ಎಸ್‌ಎಲ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಶಾಸಕ ಜಮೀರ್ ಅಹ್ಮದ್ ಕೂಡಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.