
ಡ್ರಗ್ಸ್ ಸೇವನೆ ಶಂಕೆ, ಲೇಟ್‌ನೈಟ್ ಪಾರ್ಟಿ ಮೇಲೆ ಸಿಸಿಬಿ ದಾಳಿ
ಮಾರತಹಳ್ಳಿಯಲ್ಲಿರುವ ಐಷಾರಾಮಿ ಹೋಟೆಲ್ ಕಾಮೆಟ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ ಲೇಟ್‌ನೈಟ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸೌತ್ ಆಫ್ರಿಕನ್ ಪ್ರಜೆಯೊಬ್ಬರು ಈ ಪಾರ್ಟಿ ಆಯೋಜಿಸಿದ್ದರು. ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಶಂಕೆಯಿದೆ.
ಬೆಂಗಳೂರು (ಏ. 09): ಮಾರತಹಳ್ಳಿಯಲ್ಲಿರುವ ಐಷಾರಾಮಿ ಹೋಟೆಲ್ ಕಾಮೆಟ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ ಲೇಟ್‌ನೈಟ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸೌತ್ ಆಫ್ರಿಕನ್ ಪ್ರಜೆಯೊಬ್ಬರು ಈ ಪಾರ್ಟಿ ಆಯೋಜಿಸಿದ್ದರು. ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಶಂಕೆಯಿದೆ. 64 ಯುವಕರು, 24 ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡ್ರಗ್ಸ್ ಸೇವನೆ ಬಗ್ಗೆ ಪರೀಕ್ಷೆಗೆ ಕಳುಹಿಸಿದ್ದಾರೆ.