POCSO Case: ಮುರುಘಾಶ್ರೀ ವಿರುದ್ಧ ಪ್ರಕರಣ ದಾಖಲು, ಮೊದಲ ಬಾರಿಗೆ ಸಿಎಂ ಪ್ರತಿಕ್ರಿಯೆ
ಮುರುಘಾಮಠದ ವಿರುದ್ಧ ಪೋಕ್ಸೋ ಮತ್ತು ಕಿಡ್ನಾಪ್ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಎರಡೂ ಪ್ರಕರಣಗಳ ತನಿಖೆ ಮಾಡುತ್ತಿದ್ದಾರೆ. ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಅಪ್ರಾಪ್ತಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಬಸವಕೇಂದ್ರ ಮುರುಘಾಮಠದ ಡಾ. ಶಿಮುಶ ಸೇರಿದಂತೆ ಐವರ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತನಿಖೆ ಬಳಿಕ ಸತ್ಯ ಹೊರಬಲಿದೆ . ಪೋಕ್ಸೋ ಮತ್ತು ಕಿಡ್ನಾಪ್ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಎರಡೂ ಪ್ರಕರಣಗಳ ತನಿಖೆ ಮಾಡುತ್ತಿದ್ದಾರೆ. ತನಿಖೆ ದೃಷ್ಟಿಯಿಂದ ಇದರ ಬಗ್ಗೆ ಈಗ ಮಾತನಾಡುವುದಿಲ್ಲ ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದಿದ್ದಾರೆ.
ಮುರುಘಾ ಮಠ ಶ್ರೀಗಳ ವಿರುದ್ಧ ಅತ್ಯಾಚಾರ ಆರೋಪ, ಜುಲೈ 25ಕ್ಕೆ ಬೆಂಗಳೂರಿಗೆ ಬಂದಿದ್ದ ವಿದ್ಯಾರ್ಥಿನಿಯರು!
ಇನ್ನು ಮುರುಘಾಮಠದ ಪರ ವಕೀಲರ ವಿಶ್ವನಾಥಯ್ಯ ಮಾತನಾಡಿ ಮುರುಘಾಶ್ರೀಗಳ ವಿರುದ್ಧ ಸುಳ್ಳು ದೂರು ದಾಖಲಾಗಿದೆ. ಮಠದ ವಿರೋಧಿ ಶಕ್ತಿಗಳು ಈ ಕೃತ್ಯ ನಡೆಸಿದ್ದಾರೆ. ಹಾಸ್ಟೆಲ್ ವಿದ್ಯಾರ್ಥಿನಿಯರ ತಲೆಕೆಡಿಸಿ ದುರುಪಯೋಗ ಪಡಿಸಿಕೊಳ್ಳಲಾಗಿದೆ. ಪ್ರಕರಣದ ಬಗ್ಗೆ ಕಾನೂನು ಹೋರಾಟ ಮಾಡಲಾಗುವುದು. ಸುಳ್ಳು ದೂರು ನೀಡಿದವರು ಕೇಸ್ ವಾಪಸ್ ಪಡೆಯಲಿ ಎಂದರು.