
ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ವಶದಲ್ಲಿ ದರ್ಶನ್ ಗ್ಯಾಂಗ್: ಪೊಲೀಸರು ಕೊಟ್ಟ ಆ 6 ಕಾರಣಗಳೇನು?
ದರ್ಶನ್ ಮತ್ತು ಗ್ಯಾಂಗ್‌ನನ್ನು ನ್ಯಾಯಾಲಯದ ಆದೇಶ ಮೇರೆಗೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್(Darshan) ಸೇರಿದಂತೆ 15 ಆರೋಪಿಗಳನ್ನು ನ್ಯಾಯಾಲಯದ ಆದೇಶ ಮೇರೆಗೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈ ತಿಂಗಳ 20ರವರೆಗೆ ದರ್ಶನ್ ಮತ್ತು ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿ ಇರಲಿದೆ. ಪೊಲೀಸರು ಒಂಬತ್ತು ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಕೇಳಿದ್ದರು. ಆದ್ರೆ ಮ್ಯಾಜಿಸ್ಟ್ರೇಟ್ ಕೋರ್ಟ್(Magistrate Court) 9 ದಿನಗಳ ಬದಲಾಗಿ 5 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ನಟ ದರ್ಶನ್ ಪೊಲೀಸರ ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ನೀಡ್ತಿಲ್ಲ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಕೊಲೆಗೆ ಪ್ರಮುಖ ಕಾರಣ ಆತನ ಪವಿತ್ರಾ ಗೌಡಗೆ(Pavithra Gowda) ಕೆಟ್ಟದಾಗಿ ಮೆಸೇಜ್ ಮಾಡ್ತಿದ್ದ ಎಂಬುದಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: ದರ್ಶನ್, ಪವಿತ್ರಾ ಗೌಡ ವಿರುದ್ಧ ಪ್ರಬಲ ಸಾಕ್ಷ್ಯ ಸಂಗ್ರಹ: 10ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯ ಪಡೆದ ತನಿಖಾಧಿಕಾರಿಗಳು!