Drug Deal ಸಿಎಂ ಮನೆ ಬಳಿ ಗಾಂಜಾ ಮಾರಾಟ ಕೇಸ್, ಆರ್‌ಟಿ ನಗರ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಸಸ್ಪೆಂಡ್

 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಬಳಿ ಗಾಂಜಾ ಮಾರಾಟ ಮಾಡಿದ ಕೇಸ್ನ ತನಿಖೆ ಸರಿಯಾಗಿ ನಡೆಸದ ಆರೋಪದ ಹಿನ್ನೆಲೆಯಲ್ಲಿ ಆರ್. ಟಿ. ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಶ್ವಥ್ ಗೌಡ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

First Published Jan 19, 2022, 6:39 PM IST | Last Updated Jan 19, 2022, 6:39 PM IST

ಬೆಂಗಳೂರು, (ಜ.19): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಬಳಿ ಗಾಂಜಾ ಮಾರಾಟ ಮಾಡಿದ ಕೇಸ್ನ ತನಿಖೆ ಸರಿಯಾಗಿ ನಡೆಸದ ಆರೋಪದ ಹಿನ್ನೆಲೆಯಲ್ಲಿ ಆರ್. ಟಿ. ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಶ್ವಥ್ ಗೌಡ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

Drug Mafia: ರಾಜ್ಯದಲ್ಲಿ ಗಾಂಜಾ ಸಾಗಾಟ ಧಂದೆಗೆ ಪೊಲೀಸರೇ ಕಿಂಗ್‌ ಪಿನ್!‌

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ತನಿಖಾ ವರದಿಯನ್ನು ಆಧರಿಸಿ ಇಂದು(ಬುಧವಾರ)ಆರ್‌ಟಿ ನಗರ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಅವರನ್ನ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.