ಅಡುಗೆ ಕುಕ್ಕರ್‌ನಲ್ಲಿ ತಯಾರಾಗುತ್ತಿತ್ತು ಮಾದಕ ವಸ್ತು: ಬೆಂಗಳೂರು ಡ್ರಗ್ ಮುಕ್ತ ನಗರವಾಗುವುದು ಯಾವಾಗ..?

ಬೆಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಬೇಟೆ
ಬೆಂಗಳೂರಿನಲ್ಲಿ ಡ್ರಗ್ಸ್‌ ತಯಾರಿಸುವ ಫ್ಯಾಕ್ಟರಿ
ಡ್ರಗ್ ಪೆಡ್ಲರ್ ಕಿಂಗ್ ಬೆಂಜಿಮನ್ 7 ದಿನ ಕಸ್ಟಡಿಗೆ

First Published Nov 12, 2023, 8:42 AM IST | Last Updated Nov 12, 2023, 8:42 AM IST

ಬೆಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ಮಾಡಿದ್ದಾರೆ. ಡ್ರಗ್ಸ್ ಫ್ಯಾಕ್ಟರಿ (Drugs) ನಡೆಸುತ್ತಿದ್ದ ಓರ್ವ ವಿದೇಶಿ ಆರೋಪಿಯನ್ನು ಸಿಸಿಬಿ ಪೊಲೀಸರು(CCb Police) ಬಂಧಿಸಿದ್ದಾರೆ. ಬಂಧಿತನಿಂದ ಬರೋಬ್ಬರಿ 10 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದುಕೊಳ್ಳಲಾಗಿದೆ. ಬೆಂಗಳೂರಿನ(Bengaluru) ರಾಮಮೂರ್ತಿನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಡ್ರಗ್ ದಂಧೆ ನಡೆಯುತ್ತಿದೆ ಎಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಸಿಕ್ಕಿತ್ತು. ಮಾಹಿತಿ ಆಧಾರದ ಮೇಲೆ ದಾಳಿ ಮಾಡಿದ ಅಧಿಕಾರಿಗಳಿಗೆ ಬಿಗ್ ಶಾಕ್ ಕಾದಿತ್ತು. ಸಿಸಿಬಿಯ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು, ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ(Drugs factory) ನಡೆಸುತ್ತಿದ್ದ ನೈಜೀರಿಯಾದ ವ್ಯಕ್ತಿಯನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡಿದ್ದಾರೆ. ಈ ದಾಳಿ ಮೇಲೆ ಭರ್ಜರಿ ಕಾರ್ಯಚರಣೆ ನಡೆಸಿದ್ದು, ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ನೈಜೀರಿಯಾ ಮೂಲದ ಪ್ರಜೆ ಬೆಂಜಮಿನ್ ಎನ್ನುವಾತನನ್ನು ಬಂಧಿಸಿದ್ದಾರೆ. ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ಬೆಂಜಮಿನ್‌ನಿಂದ ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತ ನೈಜೀರಿಯಾ ಪ್ರಜೆ ಬೆಂಜಮಿನ್, ರಾಮಮೂರ್ತಿ ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿರುವುದು ಈಗ ಬೆಳಕಿಗೆ ಬಂದಿದೆ. ವಿಚಾರಿಸುವ ವೇಳೆ ಮೊದಲಿಗೆ ಅರೋಪಿ ಬಳಿ 100 ಗ್ರಾಂ ಒಆಒಂ ಪತ್ತೆಯಾಗಿದೆ. ನಂತರ ಆರೋಪಿ ವಿಚಾರಣೆಯನ್ನು ತೀವ್ರಗೊಳಿಸಿದ ಬಳಿಕ ಒಆಒಂ ಕ್ರಿಸ್ಟಲ್ ತಯಾರಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ಇದನ್ನೂ ವೀಕ್ಷಿಸಿ:  ನವೆಂಬರ್ 15ಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪದಗ್ರಹಣ!