Asianet Suvarna News Asianet Suvarna News
breaking news image

ಬೆಂಗಳೂರಿನಲ್ಲೊಂದು ಫೇಕ್ ಕಿಡ್ನಿ ದಂಧೆ! ಕಿಡ್ನಿ ಮಾರುವ ಯೋಚನೆ ಮಾಡ್ತಿದ್ದೀರಾ? ಹುಷಾರ್!

 ನಗರದ ಪ್ರತಿಷ್ಠಿತ ಆಸ್ಪತ್ರೆಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ಸೃಷ್ಟಿಸಿ ಕಿಡ್ನಿ ದಾನ(Donate Kidney) ಮಾಡಿದರೆ .4 ಕೋಟಿ ನೀಡುವುದಾಗಿ ಜಾಹೀರಾತು ಹಾಕಿ ಬಳಿಕ ಸಂಪರ್ಕಕ್ಕೆ ಬಂದವರ ಬಳಿ ವಿವಿಧ ಶುಲ್ಕಗಳ ಹೆಸರಿನಲ್ಲಿ ಲಕ್ಷಾಂತರ ರು. ಪಡೆದು ವಂಚಿಸುತ್ತಿದ್ದ ಮೂವರು ವಿದೇಶಿ ಪ್ರಜೆಗಳನ್ನು ಈಶಾನ್ಯ ಸೈಬರ್‌ ಕ್ರೈಂ ಠಾಣೆ ಪೊಲೀಸರು(Police) ಬಂಧಿಸಿದ್ದಾರೆ.

ಬೆಂಗಳೂರು(ಏ.26): ನಗರದ ಪ್ರತಿಷ್ಠಿತ ಆಸ್ಪತ್ರೆಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ಸೃಷ್ಟಿಸಿ ಕಿಡ್ನಿ ದಾನ(Donate Kidney) ಮಾಡಿದರೆ .4 ಕೋಟಿ ನೀಡುವುದಾಗಿ ಜಾಹೀರಾತು ಹಾಕಿ ಬಳಿಕ ಸಂಪರ್ಕಕ್ಕೆ ಬಂದವರ ಬಳಿ ವಿವಿಧ ಶುಲ್ಕಗಳ ಹೆಸರಿನಲ್ಲಿ ಲಕ್ಷಾಂತರ ರು. ಪಡೆದು ವಂಚಿಸುತ್ತಿದ್ದ ಮೂವರು ವಿದೇಶಿ ಪ್ರಜೆಗಳನ್ನು ಈಶಾನ್ಯ ಸೈಬರ್‌ ಕ್ರೈಂ ಠಾಣೆ ಪೊಲೀಸರು(Police) ಬಂಧಿಸಿದ್ದಾರೆ.

Bengaluru Crime: ಕಿಡ್ನಿ ಖರೀದಿಸುವ ಹೆಸರಲ್ಲಿ ಜನರಿಗೆ ಮಕ್ಮಲ್‌ ಟೋಪಿ ಹಾಕಿದ ಖದೀಮರು..!

ನೈಜೀರಿಯಾ(Nigeria) ಮೂಲದ ಮಿರಾಕಲ್‌ ಅಲಿಯಾಸ್‌ ಮಿಮಿ (28), ಸೋವ್‌ ಕಾಲಿನ್ಸ್‌ ನಿ (32), ಘಾನಾ ಮೂಲದ ಮ್ಯಾಥ್ಯೂ ಇನೋಸೆಂಟ್‌ ಅಲಿಯಾಸ್‌ ಪಾಲ್‌ (38) ಬಂಧಿತರು. ಇವರಿಂದ ಕೃತ್ಯಕ್ಕೆ ಬಳಸಿದ್ದ ಮೊಬೈಲ್‌ ಫೋನ್‌ಗಳು, ಲ್ಯಾಪ್‌ಟಾಪ್‌ ಹಾಗೂ ಇತರೆ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Video Top Stories