Asianet Suvarna News Asianet Suvarna News

ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು, ಪವಾಡಸದೃಶ ರೀತಿಯಲ್ಲಿ ಮಗು ಬಚಾವ್!

Sep 18, 2021, 9:40 AM IST

ಬೆಂಗಳೂರು (ಸೆ. 18): ಸ್ಥಳೀಯ ಪತ್ರಿಕೆ ಸಂಪಾದಕ ಶಂಕರ್ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಿಗಳರಪಾಳ್ಯದಲ್ಲಿ ನಡೆದಿದೆ. 

ಭಾರತಿ (50), ಸಿಂಚನಾ (33), ಸಿಂಧೂರಾಣಿ ( 30),  ಮಧುಸಾಗರ್ (27) ಆತ್ಮಹತ್ಯೆಗೆ ಶರಣಾದವರು. ಮಗಳು ಸಿಂಧೂರಾಣಿ ಗಂಡನ ಮನೆಗೆ ಹೋಗದಿದ್ದಕ್ಕೆ ಬೇಸರಗೊಂಡಿದ್ದ ಶಂಕರ್, ಮನೆಯಲ್ಲಿ ಜಗಳವಾಡಿಕೊಂಡು ಮನೆ ಬಿಟ್ಟು ಹೋಗಿದ್ದರು. ನಿನ್ನೆ ಮನೆಗೆ ವಾಪಸ್ಸಾಗಿದ್ದಾರೆ. ಮನೆ ಬೀಗ ಹಾಕಿದ್ದನ್ನು ಗಮನಿಸಿ ಸ್ನೇಹಿತರ ಮನೆಗೆ ಹೋಗಿದ್ಧಾರೆ. ಮನೆಯವರಿಗೆ ಸಾಕಷ್ಟು ಬಾರಿ ಕರೆ ಮಾಡಿದರೂ ರಿಸೀವ್ ಮಾಡದೇ ಇದ್ದಾಗ ಮನೆಗೆ ಬಂದು ಕಿಟಕಿ ಗಾಜು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.