Asianet Suvarna News Asianet Suvarna News

'ಗ್ಯಾಂಗ್‌ ರೇಪ್ ಆರೋಪಿಗಳ ಬಗ್ಗೆ 34 ಸಾಕ್ಷ್ಯ ಸಿಕ್ಕಿವೆ'

Aug 26, 2021, 5:23 PM IST

ಮೈಸೂರು(ಆ. 26)  ಮೈಸೂರಿನ ಗ್ಯಾಂಗ್ ರೇಪ್ ಆರೋಪಿಗಳ  ಸುಳಿವು ಸಿಕ್ಕಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ತಿಳಿಸಿದ್ದಾರೆ. ಪೊಲೀಸರಿಗೆ 34 ಸಾಕ್ಷ್ಯಗಳು ಸಿಕ್ಕಿವೆ ಎಂದು ಹೇಳಿದ್ದಾರೆ.

ರೇಪ್ ಬಗ್ಗೆ ವಿವಾದಿತ ಹೇಳಿಕೆ ಕೊಟ್ಟ ಗೃಹ ಸಚಿವ

ಸಂತ್ರಸ್ತೆ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದರು. ಸಂತ್ರಸ್ತೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಕೌನ್ಸೆಲಿಂಗ್ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇನ್ನೊಂದು ಕಡೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ.  ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆಗೂ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.