ಮಹಿಳೆಯರ ಮೇಲೆ ಹಲ್ಲೆ ಆರೋಪ: ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರನ ವಿರುದ್ಧ FIR
ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಮನೆಗೆಲಸದ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು (ಅ. 24): ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಮನೆಗೆಲಸದ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಎಫ್‌ಐಆರ್ ದಾಖಲಾಗಿದೆ.
ಸೌಂದರ್ಯ ಜಗದೀಶ್ ಪುತ್ರ, ಸ್ನೇಹಿತ್, ತಮ್ಮ ಮನೆ ಎದುರಿರುವ ಈಸ್ಟ್ ವೆಸ್ಟ್ ಗ್ರೂಪ್‌ನ ಮಾಲಿಕ ರಜತ್ ಮನೆಗೆ ನುಗ್ಗಿ ಗಲಾಟೆ ಮಾಡುತ್ತಾರೆ. ಈ ವೇಳೆ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರ ಮೇಲೆ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸ್ನೇಹಿತ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.