HD Kumaraswamy: ಕಾನೂನು ಎಲ್ಲಾರಿಗೂ ಒಂದೇ ತಪ್ಪು ಮಾಡಿದ್ರೆ ಶಿಕ್ಷೆ ಆಗಲೇಬೇಕು : ಕುಮಾರಸ್ವಾಮಿ
ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ರೆ ನನಗೆ ಸಂಬಂಧವಿಲ್ಲ. ಎಸ್‌ಐಟಿ ತನಿಖೆಗೆ ಆದೇಶಿಸಿದ್ದಾರೆ, ವಿದೇಶಕ್ಕೆ ಹೋಗಿದ್ರೆ ಕರ್ಕೊಂಡು ಬರೋ ಜವಾಬ್ದಾರಿ ಅವರದ್ದು. ನಾನು ಉತ್ತರಿಸಕ್ಕಾಗೋದಿಲ್ಲ ಎಂದು ಹೆಚ್‌ಡಿಕೆ ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ(Prajwal Revanna)ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ(Prajwal Revanna Sex Scandal) ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ(HD Kumaraswamy) ಪ್ರತಿಕ್ರಿಯೆ ನೀಡಿದ್ದಾರೆ. ನಾನಾಗಲಿ, ಹೆಚ್.ಡಿ. ದೇವೇಗೌಡರಾಗಲಿ ಈ ರೀತಿಯ ಕೆಲಸ ಮಾಡಿಲ್ಲ. ಹೆಣ್ಣುಮಕ್ಕಳ ವಿಚಾರದಲ್ಲಿ ಗೌರವ ಕೊಟ್ಟು ಅವರ ಸಮಸ್ಯೆ ಬಗೆಹರಿಸಿ ಕಳಿಸಿದ್ದೇವೆ. ಈಗಾಗಲೇ ಸಿಎಂ ಎಸ್‌ಐಟಿ(SIT) ತನಿಖೆಗೆ ಆದೇಶ ನೀಡಿದ್ದಾರೆ ಎಂದು ಗಮನಿಸಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ ಹಾಸನ(Hassan) ಚುನಾವಣಾ ಪ್ರಚಾರ ವೇಳೆ ಪ್ರಕರಣ ಆರಂಭವಾಗಿದೆ. ವಾಸ್ತವಾಂಶ ಹೊರಬರಲಿ,ತನಿಖೆ ಆದ್ಮೇಲೆ ಸತ್ಯಾಸತ್ಯತೆ ಹೊರ ಬರಲಿದೆ. ನೆಲದ ಕಾನೂನಲ್ಲಿ ತಪ್ಪು ಮಾಡಿದವನು, ಉಪ್ಪು ತಿಂದವನು ನೀರು ಕುಡಿಯಲೇಬೇಕು. ನಾವು ತಪ್ಪು ಮಾಡಿದವರನ್ನು ಕ್ಷಮಿಸುವುದಿಲ್ಲ. ಹೀಗಾಗಿ ತನಿಖೆ ವರದಿ ಬರಲಿ, ಬಂದ್ಮೇಲೆ ಮಾತಾಡುತ್ತೇನೆ ಎಂದು ಹೇಳಿದರು.
ಇದನ್ನೂ ವೀಕ್ಷಿಸಿ: "Common Man Is More Powerful" ಅನ್ನೋ ನಿಮ್ಮ ಮಾತು ಬರೀ ಭಾಷಣಕ್ಕೆ ಸೀಮಿತವೇ?