
ಚಂದ್ರು ನಿಗೂಢ ಸಾವು: ಇದು ಕೊಲೆಯೋ ಅಥವಾ ಅಪಘಾತವೋ?
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಹೋದರ ರಮೇಶ್ ಅವರ ಪುತ್ರ ಚಂದ್ರಶೇಖರ್ ನಿಗೂಢ ಸಾವು, ಪ್ರಕರಣ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ನಾಲ್ಕೈದು ದಿನಗಳ ಹಿಂದೆ ನಾಪತ್ತೆಯಾಗಿದ್ದ ಚಂದ್ರು, ಕಾಲುವೆಯಲ್ಲಿ ಕಾರು ಸಹಿತ ಶವವಾಗಿ ಪತ್ತೆಯಾಗಿದ್ದಾರೆ. ಇದು ಕೊಲೆಯೋ ಅಥವಾ ಅಪಘಾತವೋ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಅಂತ್ಯ ಸಂಸ್ಕಾರ ನಡೆಯಲಿದ್ದು, ಶಾಸಕರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಚಂದ್ರು ಶವದ ಎದುರು ಶಾಸಕ ರೇಣುಕಾಚಾರ್ಯ, ತಂದೆ ರಮೇಶ್ ಹಾಗೂ ತಾಯಿ ಉಮಾ ಕಣ್ಣೀರು ಹಾಕುತ್ತಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ