Asianet Suvarna News Asianet Suvarna News

ಕೊಪ್ಪಳ: ಹುಲಿಹೈದರ್‌ನಲ್ಲಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ: ಇಬ್ಬರ ಕೊಲೆಯಲ್ಲಿ ಅಂತ್ಯ

ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಇಬ್ಬರು ಮೃತಪಟ್ಟಿರುವ, ಅನೇಕರು ಗಾಯಗೊಂಡಿರುವ ಘಟನೆ ನಡೆದಿದೆ.

Aug 11, 2022, 5:30 PM IST

ಕೊಪ್ಪಳ, (ಆಗಸ್ಟ್12): ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಇಬ್ಬರು ಮೃತಪಟ್ಟಿರುವ, ಅನೇಕರು ಗಾಯಗೊಂಡಿರುವ ಘಟನೆ ನಡೆದಿದೆ.

ಅಪರಾಧ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಡೆದಾಟದಲ್ಲಿ ಯಂಕಪ್ಪ ತಳವಾರ (60), ಪಾಷಾವಲಿ (27) ಎಂಬುವವರು ಮೃತಪಟ್ಟಿದ್ದು 10ಕ್ಕೂ ಹೆಚ್ಚು ಜನರಿಗೆ ಪೆಟ್ಟು ತಗುಲಿದೆ. ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ ಬಿಗುವಿನ ವಾತಾವಾರಣ ಸೃಷ್ಟಿಯಾಗಿದ್ದು, ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.