ಅಕ್ರಮ ಗೋ ಮಾಂಸ ಸಾಗಾಟ: ವಾಹನ ತಡೆದು ಬೆಂಕಿ ಇಟ್ಟ ಶ್ರೀರಾಮ ಸೇನೆ ಕಾರ್ಯಕರ್ತರು

ಗೋ ಮಾಂಸ ಸಾಗಿಸುತ್ತಿದ್ದ ವಾಹನ ತಡೆದು ಶ್ರೀರಾಮ ಸೇನೆ ಕಾರ್ಯಕರ್ತರು ಬೆಂಕಿ ಇಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
 

Share this Video
  • FB
  • Linkdin
  • Whatsapp

ಗೋ ಮಾಂಸ(Beef) ಸಾಗಿಸುತ್ತಿದ್ದ ವಾಹನ ತಡೆದು ಶ್ರೀರಾಮ ಸೇನೆ ಕಾರ್ಯಕರ್ತರು(Sri Ram Sena activists) ಬೆಂಕಿ ಹಚ್ಚಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಕಾರ್ಯಕರ್ತರನ್ನು ಪೊಲೀಸರು(police) ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಸುಮಾರು 20ಕ್ಕೂ ಅಧಿಕ ಕಾರ್ಯಕರ್ತರ ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ಹಿನ್ನೆಲೆ ನಗರದೆಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಸ್ಥಳದಲ್ಲಿ ಎಸ್‌ಪಿ, ಎಎಸ್‌ಪಿ, ಡಿವೈಎಸ್‌ಪಿ ಹಾಗೂ ಇನ್‌ಸ್ಪೆಕ್ಟರ್‌ಗಳು ಮೊಕ್ಕಾಂ ಹೂಡಿದಿದ್ದಾರೆ. ದೊಡ್ಡಬಳ್ಳಾಪುರ(Doddaballapur) ನಗರದ ಐಬಿ ವೃತ್ತ ಹಾಗೂ ಗುಂಜೂರು ಟೋಲ್‌ಗಳ ಸಿಸಿಟಿವಿ ಪರಿಶೀಲನೆ ನಡೆಸಲಾಗಿದೆ. ಶ್ರೀರಾಮಸೇನೆ ಕಾರ್ಯಕರ್ತರನ್ನ ವಶಕ್ಕೆ ಪಡೆದಿದಕ್ಕೆ ಮುಖಂಡರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದಲ್ಲಿ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ:  ಬೆಂಗಳೂರಲ್ಲಿ ‘ಮಹಾಲಕ್ಷ್ಮೀ ಲೇಔಟ್ ಹಬ್ಬ’ ಸಂಭ್ರಮ: ಕನ್ನಡಪ್ರಭ, ಸುವರ್ಣ ನ್ಯೂಸ್ ಸಹಯೋಗದಲ್ಲಿ ಕಾರ್ಯಕ್ರಮ

Related Video