ಉಡುಪಿಯಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ವಿವಾದ: ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ
ಉಡುಪಿಯಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ವಿವಾದ ಪ್ರಕರಣಕ್ಕೆ ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ ಕೊಟ್ಟಿದೆ. ನಿನ್ನೆ ರಾತ್ರಿಯೇ ಖುಷ್ಬು ಸುಂದರ್ ಉಡುಪಿಗೆ ಭೇಟಿ ಕೊಟ್ಟಿದ್ದಾರೆ. ಇಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ.
ಉಡುಪಿ ನೇತ್ರಾ ಪ್ಯಾರಾ ಮೆಡಿಕಲ್ ಕಾಲೇಜಿನ ಟಾಯ್ಲೆಟ್‌ನಲ್ಲಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ(Hindu girls Video) ಚಿತ್ರೀಕರಣ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿತ್ತು. ಹೋರಾಟಗಾರ್ತಿ ರಶ್ಮಿ ಸಮಂತ್ ಟ್ವೀಟ್‌ನನ್ನು(Rashmi Samant) ಏಷ್ಯಾನೆಟ್ ಸುವರ್ಣ ನ್ಯೂಸ್ ನಿರಂತರ ವರದಿ ಮಾಡಿದ ಬಳಿಕ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಶಬನಾಝ್, ಆಲ್ಫಿಯಾ, ಅಲಿಮಾ ಮೂವರು ವಿದ್ಯಾರ್ಥಿನಿಯರು ಮತ್ತು ಕಾಲೇಜ್ ಆಡಳಿತ ಮಂಡಳಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡ ಮಲ್ಫೆ ಠಾಣೆ ಪೊಲೀಸರು FIR ಹಾಕಿದ್ದಾರೆ. ಉಡುಪಿ ಕಾಲೇಜಿನಲ್ಲಿನ ವಿಡಿಯೋ ಪ್ರಕರಣ (Udupi college video case) ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್( ಉಡುಪಿಗೆ ಬಂದಿಳಿದಿದ್ದಾರೆ. ಈಗಾಗಲೆ ಎಸ್ಪಿ, ಡಿಸಿ ಜೊತೆ ಸಭೆ ನಡೆಸಿ ಪ್ರಕರಣದ ಇಂಚಿಂಚೂ ಮಾಹಿತಿ ಕಲೆಹಾಕಿದ ಖುಷ್ಬು 2 ದಿನ ಉಡುಪಿಯಲ್ಲೇ ಮೊಕ್ಕಾಂ ಹೂಡಲಿದ್ದಾರೆ. ಇಂದು ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತ ವಿದ್ಯಾರ್ಥಿನಿಯರನ್ನು ಭೇಟಿ ಮಾಡಲಿದ್ದಾರೆ.
ಇದನ್ನೂ ವೀಕ್ಷಿಸಿ: ಕೊಚ್ಚಿಹೋದ ಯುವಕ.. 70 ಗಂಟೆಯಾದ್ರೂ ಸಿಗದ ಶವ: ಮಗನ ಮೃತದೇಹಕ್ಕಾಗಿ ಅನ್ನ, ನೀರು ಬಿಟ್ಟ ಪೋಷಕರು