Asianet Suvarna News Asianet Suvarna News

KSRTC Transfer Scam; ಶ್ರೀರಾಮುಲು ವಿರುದ್ಧ ಬಹುದೊಡ್ಡ ಭ್ರಷ್ಟಾಚಾರ ಆರೋಪ!

40% ಕಮಿಷನ್ ಆಯ್ತು. ಈಗ ಟ್ರಾನ್ಸ್‌ಫರ್‌ ದಂಧೆ ಆರೋಪ ಕೇಳಿಬಂದಿದೆ. ಲಕ್ಷ ಲಕ್ಷ ಪಡೆದು ಸರ್ಕಾರಿ ನೌಕರರ ವರ್ಗಾವಣೆ ಮಾಡಲಾಗಿದೆ ಎಂದು ಸಚಿವ ಶ್ರೀರಾಮುಲು ವಿರುದ್ಧ ಈ ಆರೋಪ ಕೇಳಿಬಂದಿದೆ.

ಬೆಂಗಳೂರು (ಆ.2): ಮುಂದಿನ ಚುನಾವಣೆಗೆ ಕಾಂಗ್ರೆಸ್ ಪಾಲಿಗೆ ಬಿಜೆಪಿ ಭ್ರಷ್ಟಾಚಾರವೇ ದೊಡ್ಡ ಅಸ್ತ್ರವಾಗುತ್ತಾ ಎಂಬ ಪ್ರಶ್ನೆ ಈಗ ಹುಟ್ಟಿಕೊಂಡಿದೆ. ಈಗಾಗಲೇ 40% ಕಮೀಷನ್ ದಂಧೆ ಎಂಬ ಆರೋಪ ಬಹಿರಂಗವಾಗಿರುವ ಸತ್ಯ.  ಇದೀಗ ಸಾರಿಗೆ ಸಚಿವ ಶ್ರೀರಾಮುಲು ವಿರುದ್ಧ ಬಹುದೊಡ್ಡ ಭಷ್ಟಾಚಾರ ಆರೋಪ ಕೇಳಿಬಂದಿದೆ. ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಲ್ಲಿ ವರ್ಗಾವಣೆಗಾಗಿ ಭರ್ಜರಿ ಡೀಲ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಲಕ್ಷ ಲಕ್ಷ ಹಣ ಪಡೆದು ಕೆಎಸ್‌ಆರ್‌ಟಿಸಿ ನೌಕರರ ವರ್ಗಾವಣೆ ಮಾಡಲಾಗಿದೆ ಎಂದು ನೌಕರರ ಸಂಘದ ಅಧ್ಯಕ್ಷ ಅನಂತ ಸುಬ್ಬುರಾವ್ ಅವರು ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಮೂಲಕ ದೂರು ನೀಡಿದ್ದಾರೆ.

ಬಳ್ಳಾರಿ: ಸಾರಿಗೆ ಸಚಿವ ಶ್ರೀರಾಮುಲು ತವರಲ್ಲೇ ಬಸ್ಸಿಗಾಗಿ ಪರದಾಟ

ಇನ್ನು ನಿನ್ನೆಯಷ್ಟೇ (ಆ.1) ಸಚಿವ  ಶ್ರೀರಾಮುಲು ಅವರು ಬಳ್ಳಾರಿ ನಗರದಲ್ಲಿ 27.25 ಎಕರೆ ಜಮೀನು ಕಬಳಿಸಿದ್ದಾರೆಂಬ ಆರೋಪ ಕೇಳಿಬಂದಿತ್ತು.  ಈ ಬಗ್ಗೆ ಸುಪ್ರೀಂಕೋರ್ಟ್​ನ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ್ ಆಗ್ರಹಿಸಿದ್ದರು. ಹೀಗೆ ಒಂದಲ್ಲ ಒಂದು ಭ್ರಷ್ಟಾಚಾರ ಆರೋಪ ಶ್ರೀರಾಮುಲು ವಿರುದ್ಧ ಕೇಳಿಬರುತ್ತಿದೆ.

Video Top Stories