Bengaluru Crime: ಕಾಲೇಜಿನ ಕಟ್ಟಡದಿಂದ ಜಿಗಿದು ಕಾನೂನು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಕಟ್ಟಡದ ಏಳನೇ ಮಹಡಿಯಿಂದ ಹಾರಿದ ವಿದ್ಯಾರ್ಥಿನಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ ಘಟನೆ ನಡೆದಿದೆ. 

First Published Dec 19, 2022, 5:06 PM IST | Last Updated Dec 19, 2022, 5:06 PM IST

ಬೆಂಗಳೂರು (ಡಿ.19):  ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಕಟ್ಟಡದ ಏಳನೇ ಮಹಡಿಯಿಂದ ಹಾರಿದ ವಿದ್ಯಾರ್ಥಿನಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ ಘಟನೆ ನಡೆದಿದೆ. 

ವಿವಿಪುರಂ ಬಳಿ ಇರುವ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಕಾನೂನು (ಎಲ್‌ಎಲ್‌ಬಿ) ಪದವಿ ಮೊದಲ ವರ್ಷ ಓದುತ್ತಿದ್ದ ವಿದ್ಯಾರ್ಥಿನಿ ವಾಣಿ (23) ಸಾವನ್ನಪ್ಪಿದ್ದಾಳೆ. ಸೋಮವಾರ ಕಾಲೇಜಿಗೆ ಬಂದವಳೇ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಏಳನೇ ಮಹಡಿಯಿಂದ ಹಾರಿದ್ದಾಳೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾರ್ಥಿನಿಯನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ತೀವ್ರ ರಕ್ತಸ್ರಾವ ಉಂಟಾಗಿದ್ದು, ದೇಹದಲ್ಲಿನ ಮೂಳೆಗಳು ಪುಡಿ-ಪುಡಿ ಆಗಿದ್ದವು. ಇನ್ನು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದುಬಂದಿದೆ. 

Video Top Stories