ಗಲಭೆ ಪೀಡಿತ ಪ್ರದೇಶಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ: ಶಿವಮೊಗ್ಗ ನಗರದಾದ್ಯಂತ ಸೆಕ್ಷನ್ 144 ವಿಸ್ತರಣೆ

ಶಿವಮೊಗ್ಗದ ರಾಗಿಗುಡ್ಡ ಪ್ರದೇಶಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವಾನ ಹೇಳಿದರು.
 

Share this Video
  • FB
  • Linkdin
  • Whatsapp

ಶಿವಮೊಗ್ಗ: ರಾಗಿಗುಡ್ಡದ ಸಂತ್ರಸ್ತರ ಮನೆಗಳಿಗೆ ಸಚಿವ ಮಧು ಬಂಗಾರಪ್ಪ(Madhu Bangarappa) ಭೇಟಿ ನೀಡಿ, ಸಾಂತ್ವಾನ ಹೇಳಿದರು. ಮಧು ಬಂಗಾರಪ್ಪ ಅವರಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಎಸ್ ಪಿ ಮಿಥುನ್ ಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರ ಸಾಥ್ ನೀಡಿದರು. ಶಿವಮೊಗ್ಗದ ರಾಗಿ ಗುಡ್ಡದಲ್ಲಿ(Ragi Gudda) ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 60 ಮಂದಿ ಬಂಧಿಸಿದ್ದು , 24 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಶಿವಮೊಗ್ಗ ನಗರದಾದ್ಯಂತ ಸೆಕ್ಷನ್ 144 ವಿಸ್ತರಣೆ ಮಾಡಲಾಗಿದ್ದು, ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಮನೆ, ಬೈಕ್, ಕಾರು ಮೊದಲಾದ ವಾಹನಗಳು ಸೇರಿದಂತೆ ಒಟ್ಟು 24 ಎಫ್ಐಆರ್ ದಾಖಲಾಗಿವೆ. ಶಿವಮೊಗ್ಗ ನಗರದ ಆಯಕಟ್ಟಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ರಾಗಿ ಗುಡ್ಡದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ.

ಇದನ್ನೂ ವೀಕ್ಷಿಸಿ: ಶಿವಮೊಗ್ಗ ಈದ್‌ ಮಿಲಾದ್ ಗಲಾಟೆ: ಪೊಲೀಸರ ಮೇಲೆಯೇ ಮನಸೋ ಇಚ್ಛೆ ಕಲ್ಲು ತೂರಿದ ಪುಂಡರು !

Related Video