Asianet Suvarna News Asianet Suvarna News

ಸಿಲಿಕಾನ್‌ ಸಿಟಿ ಮಹಿಳೆಯರೇ ಎಚ್ಚರ: ಕದ್ದು ಮುಚ್ಚಿ ಪಿಜಿಯಲ್ಲಿ ಕ್ಯಾಮೆರಾ ಇಟ್ಟಿದ್ದ ಭೂಪ..!

ಮಹಿಳಾ ಪಿಜಿಯಲ್ಲಿ ವಾಸವಿರುವ ಯುವತಿಯರು ಸ್ನಾನಗೃಹದಲ್ಲಿರುವ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. 
 

First Published Jun 25, 2023, 3:24 PM IST | Last Updated Jun 25, 2023, 3:24 PM IST

ಬೆಂಗಳೂರು: ಕದ್ದು ಮುಚ್ಚಿ ಯುವತಿಯರ ಪಿಜಿಯಲ್ಲಿ ಕ್ಯಾಮೆರಾ ಇಟ್ಟಿದ್ದ ವ್ಯಕ್ತಿಯನ್ನು ಮಹಾದೇವಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆತನ ಮೊಬೈಲ್‌ನನ್ನು ಚೆಕ್‌ ಮಾಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಈತ ಖಾಸಗಿ ಬ್ಯಾಂಕ್‌ನಲ್ಲಿ ಕ್ರೆಡಿಟ್‌ ಕಾರ್ಡ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರ ಮೂಲದ ಅಶೋಕ್ ಬಂಧಿತ ಯುವಕ. ಮಹಾದೇವಪುರ ವ್ಯಾಪ್ತಿಯ ಹೂಡಿಯಲ್ಲಿರುವ ಪಿಜಿಯಲ್ಲಿ ಆರೋಪಿ ವಾಸವಿದ್ದ ಎಂದು ತಿಳಿದುಬಂದಿದೆ. ಈತ ವಾಸಿಸುತ್ತಿದ್ದ ಪಿಜಿ ಮುಂಭಾಗದಲ್ಲೇ ಮಹಿಳಾ ಪಿಜಿ ಇತ್ತು. ಸ್ನಾನಗೃಹದ ವೆಂಟಿಲೇಷನ್‌ ಸ್ಥಳದಿಂದ ಯುವತಿಯರನ್ನು ತನ್ನ ಮೊಬೈಲ್‌ ಚಿತ್ರೀಕರಣ ಮಾಡುತ್ತಿದ್ದ. ಕಳೆದ ಮೂರು ತಿಂಗಳಿನಿಂದ ಈತ ಈ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.ಜೂನ್‌ 21 ರಂದು ಈತ ವಿಡಿಯೋ ಮಾಡುತ್ತಿದ್ದಾಗ ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ವೀಕ್ಷಿಸಿ: ರಾಜ್‌ಕುಮಾರ್‌ ಕುಟುಂಬಕ್ಕೆ ಮತ್ತೊಂದು ಆಘಾತ: ಅಪಘಾತದಲ್ಲಿ ಕಾಲು ಕಳೆದುಕೊಂಡ ನಟ ಧ್ರುವನ್‌

Video Top Stories