ಮಂಗಳೂರು: ಕಾಂಗ್ರೆಸ್ ಪುರಸಭೆ ಸದಸ್ಯನ ಪಟಾಲಂನಿಂದ ಗೂಂಡಾಗಿರಿ

ಬಂಟ್ವಾಳದಲ್ಲಿ ಕಾಂಗ್ರೆಸ್ ಪುರಸಭೆ ಸದಸ್ಯ ಮತ್ತು ರೌಡಿಶೀಟರ್ ಆಗಿರುವ ಅಸೈನರ್ ತಂಡದಿಂದ ಮನೆ ಬಾಡಿಗೆ ವಿಚಾರದಲ್ಲಿ ಮಧ್ಯರಾತ್ರಿ ಹಲ್ಲೆ ನಡೆದಿದೆ. ಗರ್ಭಿಣಿ ಮಹಿಳೆ ಇದ್ದ ಮನೆಗೆ ನುಗ್ಗಿ ಪುರುಷರ ಮೇಲೆ ಹಲ್ಲೆ ಮಾಡಲಾಗಿದೆ.

First Published Dec 13, 2024, 6:50 PM IST | Last Updated Dec 13, 2024, 6:50 PM IST

ಮಂಗಳೂರು: ಬಂಟ್ವಾಳದ ಬಿ.ಮೂಡ ಗ್ರಾಮದಲ್ಲಿ ಕಾಂಗ್ರೆಸ್ ಪುರಸಭೆ ಸದಸ್ಯನ ಪಟಾಲಂ ನಿಂದ ಗೂಂಡಗಿರಿ ನಡೆದಿದೆ.  ಪುರಸಭೆ ಸದಸ್ಯ, ರೌಡಿಶೀಟರ್ ಆಗಿರೊ ಅಸೈನರ್ ತಂಡದಿಂದ ದಾಂಧಲೆ. ಗರ್ಭಿಣಿ ಮಹಿಳೆ ಇದ್ದ ಮನೆಗೆ ನುಗ್ಗಿ ಪುರುಷರ ಮೇಲೆ ಹಲ್ಲೆ ಮಾಡಲಾಗಿದೆ ಮನೆ ಬಾಡಿಗೆ ವ್ಯಾಜ್ಯ ಸಂಬಂಧ ಮಧ್ಯರಾತ್ರಿ ಹಲ್ಲೆ ನಡೆದಿದ್ದು, ಸಾಹುಲ್ ಹಮೀದ್ ಎಂಬುವವರ ಮನೆಗೆ ಮಧ್ಯರಾತ್ರಿ ನುಗ್ಗಿ ಅಸೈನರ್ ಹಲ್ಲೆಮಾಡಿದ್ದಾನೆ. ಈ ವೇಳೆ 112ಗೆ ಕರೆ ಮಾಡಿದ್ದು, ಇದರಿಂದ ಪೊಲೀಸರು ಬಂದಿದ್ದರಿಂದ ಅನಾಹುತ ತಪ್ಪಿದೆ. ಹಲ್ಲೆಯಿಂದ ಕೆಲವರಿಗೆ ಗಾಯಗಳಾಗಿದ್ದು,  ಬಂಟ್ವಾಳ ಟೌನ್ ಠಾಣೆಯಲ್ಲಿ ಎರಡು ಕಡೆಯಿಂದ ದೂರು-ಪ್ರತಿದೂರು ದಾಖಲಾಗಿದೆ. ಪೊಲೀಸರು ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್. ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರೋ ಆರೋಪಿಗಳಿಗಾಗಿ ಪೊಲೀಸರು ತಲಾಶ್ ನಡೆಸುತ್ತಿದ್ದಾರೆ.