ಗೆಳೆಯನೊಂದಿಗೆ ಬಂದಿದ್ದ ವಿದ್ಯಾರ್ಥಿನಿ ಮೇಲೆ  ಚಾಮುಂಡಿ ಬೆಟ್ಟದಲ್ಲಿ ಗ್ಯಾಂಗ್ ರೇಪ್

*ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್
* ಗೆಳೆಯನ ಜತೆ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿ
* ಪೊಲೀಸರಿಂದ ಸ್ಥಳ ಪರಿಶೀಲನೆ
* ವಿದ್ಯಾರ್ಥಿನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

First Published Aug 25, 2021, 4:58 PM IST | Last Updated Aug 25, 2021, 4:58 PM IST

ಮೈಸೂರು(ಆ. 25)  ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಆಘಾತಕಾರಿ ಘಟನೆ ಬಹಿರಂಗವಾಗಿದೆ.  ಸ್ನೇಹಿತನ ಜೊತೆ ವಿದ್ಯಾರ್ಥಿನಿ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವೇಳೆ ಕಾಮುಕರು ದಾಳಿ ಮಾಡಿದ್ದಾರೆ.

ಬಾಲಕಿ ಮೇಲೆ ದೌರ್ಜನ್ಯ ಎಸಗಿದ ಪೋರ್ನ್ ದಾಸ

ನಾಲ್ಕು ಮಂದಿ ದುಷ್ಕರ್ಮಿಗಳು ಗೆಳೆಯನ ಮೇಲೆ  ಹಲ್ಲೆ ಮಾಡಿ ನಂತರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.  ವಿದ್ಯಾರ್ಥಿನಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.  ಈ ಸಂಬಂಧ ಆಲನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.