Asianet Suvarna News Asianet Suvarna News

ಹಿಂದೂಗಳ ಮನೆಗಳಿಗೆ ನುಗ್ಗಿ ಅನ್ಯಕೋಮಿನ ಯುವಕರಿಂದ ಬೆದರಿಕೆ? ಗಲಾಟೆ ತಡೆಯಲು ಮುಂದಾದವರ ಮೇಲೂ ಹಲ್ಲೆ?

ಹಿಂದೂಗಳ ಮನೆಗಳಿಗೆ ನುಗ್ಗಿ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ.
 

ಮಂಡ್ಯ: ಹಿಂದೂಗಳ ಮನೆಗಳಿಗೆ(Hindus Houses) ನುಗ್ಗಿ ಅನ್ಯಕೋಮಿನ ಯುವಕರು(Mob Attack) ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಘಟನೆ (Mandya) ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದೆ. ಬೆಳ್ಳೂರು ಠಾಣೆ ಬಳಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಗಾಯಾಳುಗಳಿಗೆ ಆದಿ ಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾರಕಾಸ್ತ್ರಗಳ ಹಿಡಿದು ಹಿಂದೂಗಳ ಮನೆಗೆ ನುಗ್ಗಿದ ಆರೋಪ ಕೇಳಿಬಂದಿದೆ. ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಪೊಲೀಸ್ ಠಾಣೆ ಎದುರು ಗ್ರಾಮಸ್ಥರು ಜಮಾಯಿಸಿದ್ದು, ಹಳೇ ದ್ವೇಷ ಹಿನ್ನೆಲೆ ಬೆದರಿಕೆ ಹಾಕಿದ್ದಾರೆಂದು ಆರೋಪ ಮಾಡಲಾಗಿದೆ. ಬೆಳ್ಳೂರು ಪಟ್ಟಣದಲ್ಲಿ 2 DAR ತುಕಡಿ ನಿಯೋಜನೆ ಮಾಡಲಾಗಿದ್ದು, SP ಎನ್.ಯತೀಶ್ ನೇತೃತ್ವದಲ್ಲಿ ಬಿಗಿ ಭದ್ರತೆ‌ ಒದಗಿಸಲಾಗಿದೆ. 

ಇದನ್ನೂ ವೀಕ್ಷಿಸಿ:  ಮತ್ತೆ ಮಿಂಚಿದ ಮುಂಗಾರುಮಳೆ 2 ನೇಹಾ ಶೆಟ್ಟಿ! ಟಾಲಿವುಡ್‌ನಲ್ಲಿ ಅರಳುತ್ತಿರೋ ಮತ್ತೊಬ್ಬ ಕನ್ನಡ ಚೆಲುವೆ !

Video Top Stories