ಕಾಣೆಯಾಗಿದ್ದ ಜೈನ ಮುನಿ ಬರ್ಬರ ಹತ್ಯೆ: ಇಬ್ಬರ ಬಂಧನ, ಸಿಗದ ಮೃತದೇಹ

ನಂದಿ ಮಹಾರಾಜರನ್ನು ಕೊಲೆ ಮಾಡಿರುವುದಾಗಿ ಆರೋಪಿಗಳು ತನಿಖೆ ವೇಳೆ ಒಪ್ಪಿಕೊಂಡಿದ್ದಾರೆ. ಜುಲೈ 6 ರಂದು ಜೈನ ಮುನಿ ಕಾಣೆಯಾಗಿದ್ದರು.
 

First Published Jul 8, 2023, 9:29 AM IST | Last Updated Jul 8, 2023, 9:29 AM IST

ಬೆಳಗಾವಿ: ಚಿಕ್ಕೋಡಿಯಲ್ಲಿ ಕಾಣೆಯಾಗಿದ್ದ ಜೈನ ಮುನಿಯನ್ನು(Jaina muni) ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು(Acharya Shri 108 Kamkumarnandi Maharaj) ಜುಲೈ 6ರಂದು ಕಾಣೆಯಾಗಿದ್ದರು. ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನ ಮುನಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಅವರು ತನಿಖೆ ವೇಳೆ ಕೊಲೆ(murder) ಮಾಡಿರುವುದಾಗಿ ಹೇಳಿದ್ದಾರೆ. ಆದರೆ ಇನ್ನೂ ನಿನ್ನೆಯಿಂದ ಜೈನಮುನಿ ಮೃತದೇಹ ಪತ್ತೆಯಾಗದ ಕಾರಣ ಇಂದು ಮುಂಜಾನೆಯಿಂದ 6.30 ರಿಂದ ಪುನಃ ಹುಡುಕಾಟ ಶುರು ಮಾಡಿದ್ದಾರೆ. ಆರೋಪಿಗಳು ಒಮ್ಮೆ ಶವವನ್ನು ಕತ್ತರಿಸಿ ಖಟಕಬಾವಿ ಗ್ರಾಮದ ಗದ್ದೆಯ ಕೊಳವೆಬಾವಿಗೆ ಎಸೆದಿದ್ದೇವೆ ಎಂದ್ರೆ, ಮತ್ತೊಮ್ಮೆ ಶವವನ್ನು ನದಿಗೆ ಎಸೆದಿದ್ದೇವೆ ಎನ್ನುತ್ತಿದ್ದಾರೆ. ಹಾಗಾಗಿ ಅವರ ಶವ ಎಲ್ಲಿದೆ ಎಂಬುದರ ಬಗ್ಗೆ ಇನ್ನೂ ಸ್ಪಷ್ಪ ಮಾಹಿತಿ ಸಿಕ್ಕಿಲ್ಲ. ಹಣಕಾಸಿನ ವಿಚಾರವಾಗಿ ಕೊಲೆ ನಡೆದಿದೆ ಎಂದು ಪೊಲೀಸರ ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಇನ್ನೂ ಆಶ್ರಮದಲ್ಲಿ ನೀರವ ಮೌನ ಆವರಿಸಿದೆ.

ಇದನ್ನೂ ವೀಕ್ಷಿಸಿ:  Today Horoscope: ಕರ್ಕಟ ರಾಶಿಗೆ ಪ್ರವೇಶ ಮಾಡುತ್ತಿರುವ ಬುಧ: ಇಂದು ಸುಬ್ರಹ್ಮಣ್ಯ ಸ್ವಾಮಿ ಆರಾಧನೆ ಮಾಡಿ..

Video Top Stories