ಕ್ರೈಂ ಮಾಹಿತಿ ಕೊಟ್ರೆ ನೀವೇನು ಪೊಲೀಸ್ರಾ ಅಂತಾರೆ ಆರಕ್ಷಕರು! ಮೈಸೂರ ಕತೆ

* ಮೈಸೂರು ಗ್ಯಾಂಗ್ ರೇಪ್ ಪ್ರಕರಣ
* ಮೈಸೂರು ಪೊಲೀಸರ ವಿರುದ್ಧ ಸ್ಥಳೀಯರ ಆಕ್ರೋಶ
* ಕೆಲ ದಿನಗಳ ಹಿಂದೆ ಲಾರಿ ಚಾಲಕನೊಬ್ಬ ಹುಡುಗಿಯನ್ನು ಹೊತ್ತೊಯ್ಯಲು ಯತ್ನಿಸಿದ್ದ

Share this Video
  • FB
  • Linkdin
  • Whatsapp

ಮೈಸೂರು(ಆ. 26) ಮೈಸೂರು ಗ್ಯಾಂಗ್ ರೇಪ್ ಪ್ರಕರಣ ದೊಡ್ಡ ಸುದ್ದಿಯಾಗುತ್ತಿದೆ. ಮೈಸೂರು ಪೊಲೀಸರ ನಿರ್ಲಕ್ಷ್ಯವೇ ಇಷ್ಟೆಲ್ಲ ಅನಾಹುತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕೆಲ ದಿನಗಳ ಹಿಂದೆ ಲಾರಿ ಚಾಲಕನೊಬ್ಬ ಹುಡುಗಿಯನ್ನು ಹೊತ್ತೊಯ್ಯಲು ನೋಡಿದ್ದ ವೇಳೆ ಸ್ಥಳೀಯರು ರಕ್ಷಣೆ ಮಾಡಿದ್ದರು. ಅಲ್ಲದೇ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದರು.

ರೇಪ್ ಬಗ್ಗೆ ವಿವಾದಿತ ಹೇಳಿಕೆ ಕೊಟ್ಟ ಗೃಹ ಸಚಿವ

ಆದರೆ ಪೊಲೀಸರು ಯಾವ ಕ್ರಮ ತೆಗೆದುಕೊಂಡಿರಲಿಲ್ಲ. ನೀವೇನು ಪೊಲೀಸರಾ ಎಂದು ಜನರನ್ನೇ ಪ್ರಶ್ನೆ ಮಾಡಿದ್ದರು. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದಿರುವ ಪ್ರಕರಣ ಈಗ ಆತಂಕಕ್ಕೆ ಕಾರಣವಾಗಿದೆ. ಇನ್ನೊಂದು ಕಡೆ ಮೈಸೂರಿನ ಗ್ಯಾಂಗ್ ರೇಪ್ ಆರೋಪಿಗಳ ಸುಳಿವು ಸಿಕ್ಕಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ತಿಳಿಸಿದ್ದಾರೆ.

Related Video