Asianet Suvarna News Asianet Suvarna News

Niranjan Hiremath: ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ ಸಂಬಂಧ ಸರ್ಕಾರ ದಾರಿ ತಪ್ಪಿಸುತ್ತಿದೆ ಎಂದು ನೇಹಾ ತಂದೆ ನಿರಂಜನ್ ಹಿರೇಮಠ ಅವರು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಈ ಸಂಬಂಧ ಕ್ಷಮೆಯಾಚಿಸಿರುವ ಫಯಾಜ್ ತಂದೆ- ತಾಯಿ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ. 

ಒಂದು ಕಡೆ ಲೋಕಸಭಾ ಚುನಾವಣೆ ರಂಗೇರುತ್ತಿದ್ದು, ಮತ್ತೊಂದೆಡೆ ಹುಬ್ಬಳ್ಳಿಯ ನೇಹಾ ಹಿರೇಮಠ (Neha Hiremath) ಕೊಲೆ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ(Neha Hiremath murder case) ಸಂಬಂಧ ಸರ್ಕಾರ ದಾರಿ ತಪ್ಪಿಸುತ್ತಿದೆ ಎಂದು ನೇಹಾ ತಂದೆ ನಿರಂಜನ್ ಹಿರೇಮಠ(Niranjan Hiremath) ಆರೋಪ ಮಾಡಿದ್ದಾರೆ. ಅಲ್ಲದೆ ಈ ಸಂಬಂಧ ಕ್ಷಮೆಯಾಚಿಸಿರುವ ಫಯಾಜ್ ತಂದೆ- ತಾಯಿ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ. ಅವನಿಂದ ಹತ್ಯೆಯಾಗಿರೋ ನನ್ನ ಮಗಳ ಆತ್ಮಕ್ಕೆ‌ಶಾಂತಿ ಕೊಡಿಸಿ ಎಂದು ಆಗ್ರಹ ಮಾಡಿರುವ ಅವರು, ಪೊಲೀಸ್ ಆಯುಕ್ತರಿಗೆ ಸುಳ್ಳು ಮಾಹಿತಿ ನೀಡಲು ಷಡ್ಯಂತ್ರ ಮಾಡಲಾಗುತ್ತಿದೆ. ಗೃಹ ಸಚಿವರು ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ. ಗೃಹ ಸಚಿವರು, ಸ್ಥಳೀಯ ಶಾಸಕ, ಆಯುಕ್ತರು ಸಂಪರ್ಕದಲ್ಲಿದ್ದಾರೆ. ಸ್ಥಳೀಯ ಶಾಸಕರೇ ನಮ್ಮ ಜತೆಗಿದ್ದು ವ್ಯವಸ್ಥಿತ ಷಡ್ಯಂತ ಮಾಡುತ್ತಿದ್ದಾರೆ ಎನ್ನುವ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ನನ್ನ ಮಗ ಮಾಡಿದ ತಪ್ಪಿಗೆ ಕ್ಷಮೆಯಾಚಿಸುವೆ, ಯಾವ ಮಕ್ಕಳು ತಪ್ಪು ಮಾಡಿದ್ರೂ ತಪ್ಪೇ: ಫಯಾಜ್ ತಾಯಿ ಮಮ್ತಾಜ್

Video Top Stories