Asianet Suvarna News Asianet Suvarna News

ಬ್ಲಾಸ್ಟ್ ಕೇಸ್ ಬಗ್ಗೆ ಕೆಲ ಮಾಹಿತಿ ಸಿಕ್ಕಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ: ಗೃಹ ಸಚಿವ ಪರಮೇಶ್ವರ್

ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಿಂದ ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
 

ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ(Rameshwaram Cafe Blast case) ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ(Home Minister Parameshwar) ನೀಡಿದ್ದಾರೆ. ಆರೋಪಿಗಳ ಪತ್ತೆಗೆ 8 ತಂಡಗಳ ರಚನೆ ಮಾಡಲಾಗಿದೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಬ್ಲಾಸ್ಟ್ ಕೇಸ್ ಬಗ್ಗೆ ಕೆಲ ಮಾಹಿತಿ ಸಿಕ್ಕಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಎನ್‌ಐಎ, ಎನ್‌ಎಸ್‌ಜಿ ಸಹ ಬಾಂಬ್ ಬ್ಲಾಸ್ಟ್ ಬಗ್ಗೆ ತನಿಖೆ ಮಾಡುತ್ತಿದೆ. ನಮ್ಮ ಪೊಲೀಸರು ಕೂಡ ಎಲ್ಲ ಆಯಾಮದಲ್ಲೂ ತನಿಖೆ ಮಾಡ್ತಿದ್ದಾರೆ ಎಂದು ಗೃಹ ಸಚಿವರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Rameshwaram Cafe Blast: ಬಾಂಬ್‌ ಇಟ್ಟ ಒಂದೂವರೆ ಗಂಟೆ ಬಳಿಕ ಸ್ಫೋಟವಾಗುವಂತೆ ಬಾಂಬರ್‌ ಟೈಮರ್‌ ಇಟ್ಟಿದ್ದೇಕೆ ?

Video Top Stories