ಮುರುಘಾಶ್ರೀ ವಿರುದ್ಧ ಪೋಕ್ಸೋ ಕೇಸ್: ಜಡ್ಜ್ ಮುಂದೆ ವಿದ್ಯಾರ್ಥಿನಿಯರು ಹಾಜರ್?
ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾಶರಣರ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಜಡ್ಜ್ ಮುಂದೆ ಇಂದು ವಿದ್ಯಾರ್ಥಿನಿಯರು ಹಾಜರಾಗಲಿದ್ದಾರೆ ಎಂದು ತಿಳಿದುಬಂದಿದೆ.
ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾಶರಣರ ವಿರುದ್ಧ ಫೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು, ಭಾನುವಾರ ಇಡೀ ದಿನ ಸಂತ್ರಸ್ತ ಬಾಲಕಿಯರ ವಿಚಾರಣೆ ನಡೆಸಿದರು. ಈ ವೇಳೆ ಬಾಲಕಿಯರ ಹೇಳಿಕೆಯನ್ನು ವಿಡಿಯೋ ಚಿತ್ರೀಕರಣ ಮಾಡಿಕೊಂಡರು. ಮುರುಘಾಮಠದ ವಿದ್ಯಾರ್ಥಿ ನಿಲಯದಲ್ಲಿರುವ ತಮ್ಮನ್ನು ಸ್ವಾಮೀಜಿಗಳು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಇಬ್ಬರು ಅಪ್ರಾಪ್ತ ಬಾಲಕಿಯರು ನೀಡಿದ ಹೇಳಿಕೆಯಂತೆ ಮೈಸೂರಿನ ನಜರಬಾದ್ ಠಾಣೆಯಲ್ಲಿ ಶುಕ್ರವಾರ ರಾತ್ರಿ ಮುರುಘಾಶರಣರು (Murugha seer ) ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬಾಲಕಿಯರನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಲಾಗುತ್ತದೆ.