ಕುಡಿದ ಮತ್ತಿನಲ್ಲಿ ಯುವತಿಯರ ಇದೆಂಥಾ ಅವಸ್ಥೆ!.. ಎಂ.ಜಿ. ರಸ್ತೆಯಲ್ಲಿ ಹೈಡ್ರಾಮಾ..!
ಎಂ.ಜಿ. ರೋಡ್ ಮತ್ತು ಬ್ರಿಗೇಡ್ ರೋಡ್ನಲ್ಲಿ ಬೆಂಗಳೂರು ಕೇಂದ್ರ ವಿಭಾಗ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಂಗಳೂರು: ಸಿಲಿಕಾನ್ ಸಿಟಿ ಪೊಲೀಸರು ಮಧ್ಯರಾತ್ರಿ ಎಂ.ಜಿ. ರೋಡ್ ಮತ್ತು ಬ್ರಿಗೇಡ್ ರೋಡ್ನಲ್ಲಿ ರೇಡ್ ಮಾಡಿದ್ದಾರೆ. ಪಬ್ಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಶಂಕೆ ವ್ಯಕ್ತವಾದ ಹಿನ್ನೆಲೆ ಪಬ್ಗಳ ಮೇಲೆ ದಾಳಿ ಮಾಡಿ, ಮಹಿಳೆಯರು ಸೇರಿ 25ಕ್ಕೂ ಹೆಚ್ಚು ಆಫ್ರಿಕನ್ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ. ರಾತ್ರಿಯೇ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ವಶಕ್ಕೆ ಪಡೆಯುವ ವೇಳೆ ಆಫ್ರಿಕನ್ ಮಹಿಳೆಯರು ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ.ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಇಬ್ಬರು ಎಸಿಪಿ, ಆರು ಇನ್ಸ್ಪೆಕ್ಟರ್, 10 ಪಿಎಸ್ಐ, 20 ಮಹಿಳಾ ಸಿಬ್ಬಂದಿ, 20 ಪುರುಷ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಸಲಾಗಿದೆ.
ಇದನ್ನೂ ವೀಕ್ಷಿಸಿ: ಕಾನ್ಸ್ಟೇಬಲ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ: ಮಯೂರ್ ಸಾವಿನಲ್ಲೂ ರಾಜಕೀಯ ..!