Asianet Suvarna News Asianet Suvarna News

ಹಗರಿಬೊಮ್ಮನಹಳ್ಳಿ: ಕಬೋರ್ಡ್‌ ಮಧ್ಯೆ ಸುರಂಗದಲ್ಲಿ ವೇಶ್ಯಾವಾಟಿಕೆ..!

Oct 13, 2021, 10:41 AM IST

ವಿಜಯನಗರ(ಅ.13): ಬಟ್ಟೆ ಇಡುವ ಕಬೋರ್ಡ್‌ ಮಧ್ಯೆ ಸುರಂಗ ಕೊರೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ 9 ಅರೋಪಿಗಳನ್ನ ಪೊಲೀಸರು ಬಂಧಿಸಿದ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ  ಮಲ್ಲಿಗೆ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು ಎಂದು ತಿಳಿದು ಬಂದಿದೆ. ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಓರ್ವ ಮಹಿಳೆ, ಮೂವರು ಗಿರಾಕಿಗಳು, ದಂಧೆಯಲ್ಲಿ ಭಾಗಿಯಾಗಿದ್ದ 6 ಜನ ಸೇರಿದಂತೆ ಒಟ್ಟು 9 ಆರೋಪಿಗಳನ್ನ ಬಂಧಿಸಲಾಗಿದೆ. ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ವಿಜಯನಗರ ಎಸ್ಪಿ ಡಾ. ಅರುಣ್‌ ಕೆ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ಸಂಬಂಧ ಹಗರಿಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ ಲಘು ಭೂಕಂಪನದ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ