Rameshwaram cafe: 42 ದಿನ..ಕರ್ನಾಟಕ ಟು ಕೊಲ್ಕತ್ತಾ..ಹೇಗಿತ್ತು ರಾಮೇಶ್ವರಂ ಕೆಫೆ ಸ್ಫೋಟಿಸಿದ ಉಗ್ರರ ಬೇಟೆ ?

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ 42 ದಿನಗಳಿಂದ ತಲೆಮರೆಸಿಕೊಂಡಿದ್ದ  ಶಿವಮೊಗ್ಗದ ಇಬ್ಬರು ಮೋಸ್ಟ್‌ ವಾಂಟೆಡ್‌ ಶಂಕಿತ ಉಗ್ರರನ್ನು ಕೊಲ್ಕತ್ತಾದಲ್ಲಿ ಬಂಧಿಸಲಾಗಿದೆ.

Share this Video
  • FB
  • Linkdin
  • Whatsapp

ದಿ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದ(Rameshwaram cafe blast Case) ಪ್ರಮುಖ ಆರೋಪಿಗಳಾದ ‘ಶಿವಮೊಗ್ಗ ಐಸಿಸ್ ಮಾಡ್ಯುಲ್‌’ನ ಇಬ್ಬರು ಮೋಸ್ಟ್‌ ವಾಂಟೆಡ್‌ ಶಂಕಿತ ಉಗ್ರರನ್ನು ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾ(Kolkata) ಸಮೀಪ ರಾಷ್ಟ್ರೀಯ ತನಿಖಾ ದಳ ಭರ್ಜರಿ ಕಾರ್ಯಾಚರಣೆ ನಡೆಸಿ ಶುಕ್ರವಾರ ಮುಂಜಾನೆ ಸೆರೆ ಹಿಡಿದಿದೆ. ಇದರೊಂದಿಗೆ ಕೆಫೆ ಸ್ಫೋಟ ಕೃತ್ಯದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ. ಈ ಮೊದಲು ಲಾಜಿಸ್ಟಿಕ್ ನೆರವು ನೀಡಿದ ಆರೋಪದ ಮೇರೆಗೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಕಳಸದ ಮುಜಾಮಿಲ್‌ ಷರೀಫ್‌ ಹಾಗೂ ಹಳೇ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮುಸಾವೀರ್ ಸಹಚರ ಮಾಝ್‌ ಮುನೀರ್‌ ಅಹ್ಮದ್‌ನನ್ನು ಎನ್‌ಐಎ(NIA) ಬಂಧಿಸಿತ್ತು.ಕೋಲ್ಕತಾ ಸಮೀಪದ ಮೇದಿನಿಪುರದ ಹೋಟೆಲ್‌ನಲ್ಲಿ ನಕಲಿ ಹೆಸರು ಬಳಸಿ ಮುಸಾವೀರ್ ಹಾಗೂ ಮತೀನ್ ಉಳಿದುಕೊಂಡಿದ್ದರು. ಗಾಢ ನಿದ್ರೆಯಲ್ಲಿ ಶಂಕಿತರಿಗೆ ನಸುಕಿನಲ್ಲಿ ದುಃಸ್ವಪ್ನದಂತೆ ಎನ್ಐಎ ಅಧಿಕಾರಿಗಳು ಕಂಡಿದ್ದಾರೆ.

ಇದನ್ನೂ ವೀಕ್ಷಿಸಿ: Loksabha Eection 2024 : ಇಬ್ಬರು ಮಾಜಿ ಸಿಎಂ..ಇನ್ನೊಬ್ಬರು ಮಾಜಿ ಡಿಸಿಎಂ ಮತ್ತೊಬ್ಬರು ಹೈಕಮಾಂಡ್‌ ಸೇನಾನಿ..!

Related Video