Asianet Suvarna News Asianet Suvarna News

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ: ಪ್ರಧಾನಿಗೆ ಸಿದ್ದರಾಮಯ್ಯ 2ನೇ ಪತ್ರ..ಪಾಸ್‌ಪೋರ್ಟ್‌ ರದ್ದತಿಗೆ ಮತ್ತೆ ಮನವಿ

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಿ 
ಪ್ರಜ್ವಲ್ ಪ್ರಕರಣವನ್ನು ಗಂಭೀರ ಎಂದು ಪರಿಗಣಿಸಿ ರದ್ದುಗೊಳಿಸಿ
ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ 
ಪ್ರಧಾನಿ ನರೇಂದ್ರ ಮೋದಿಗೆ ಎರಡನೇ ಪತ್ರ ಬರೆದ ಸಿದ್ದರಾಮಯ್ಯ

ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಪಾಸ್‌ಪೋರ್ಟ್(Passport) ರದ್ದತಿಗೆ ಸಿಎಂ ಸಿದ್ದರಾಮಯ್ಯ(Siddaramaiah) ಮತ್ತೆ ಪ್ರಧಾನಿ ನರೇಂದ್ರ ಮೋದಿಗೆ(Narendra Modi) ಪತ್ರ(Letter) ಬರೆದಿದ್ದಾರೆ. ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ. ಪಾಸ್‌ಪೋರ್ಟ್ ಆಕ್ಟ್ 1967ನ  ಸೆಕ್ಷನ್ 10(3)(h) ಅಡಿ ರದ್ದು ಮಾಡಿ ಎಂದು ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಕೋರಿದ್ದಾರೆ. ಇದು ಪ್ರಧಾನಿಗೆ ಬರೆದ ಎರಡನೇ ಪತ್ರವಾಗಿದೆ. ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ ಬಳಸಿ ಪ್ರಯಾಣ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ FIR ದಾಖಲಾಗುವ ಕೆಲ ಗಂಟೆಗಳಿಗೂ ಮುನ್ನ ದೇಶ ತೊರೆದಿದ್ದಾರೆ. 

ಇದನ್ನೂ ವೀಕ್ಷಿಸಿ:  Bengaluru News: ನಡು ರಸ್ತೆಯಲ್ಲೇ ಚಾಲಕರ ನಡುವೆ ಫೈಟಿಂಗ್! ಸಣ್ಣ ವಿಚಾರಕ್ಕೆ ಇಷ್ಟು ದೊಡ್ಡ ಫೈಟಾ?