ಬೆಳಗಾವಿಯ ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷನ ಮೇಲೆ ಗುಂಡಿನ ದಾಳಿ

ಬೆಳಗಾವಿಯಲ್ಲಿ ಹಿಂದೂ ಸಂಘಟನೆ ಮುಖಂಡನ ಮೇಲೆ ಫೈರಿಂಗ್ ನಡೆಸಲಾಗಿದ್ದು, ಆರೋಪಿಗಳ ಪತ್ತೆಗಾಗಿ ನಾಲ್ಕು ಪ್ರತ್ಯೇಕ ತಂಡ ರಚಿಸಲಾಗಿದೆ.
 

First Published Jan 8, 2023, 12:52 PM IST | Last Updated Jan 8, 2023, 12:52 PM IST

ಬೆಳಗಾವಿಯ ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ರವಿ ಕೋಕಿತಕರ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮ ಬಳಿ ಘಟನೆ ನಡೆದಿದೆ. ಬೆಳಗಾವಿಯಲ್ಲಿ ವಿರಾಟ ಹಿಂದೂಸಮಾವೇಶದ ತಯಾರಿ ನಡೆಸುತ್ತಿದ್ದ ರವಿ ಕೋಕಿತಕರ  ಸ್ಕಾರ್ಪಿಯೋದಲ್ಲಿ ಹೋಗ್ತಿದ್ದಾಗ, ಇಬ್ಬರಿಂದ ಪೈರಿಂಗ್‌ ಮಾಡಲಾಗಿದೆ. ಆರೋಪಿಗಳ ಪತ್ತೆಗೆ ಪ್ರತ್ಯೇಕ ನಾಲ್ಕು ತಂಡಗಳ ರಚನೆ ಮಾಡಲಾಗಿದ್ದು, ಬೆಳಗಾವಿಯಿಂದ ಹಿಂಡಲಗಾ ಗ್ರಾಮಕ್ಕೆ ತೆರಳುವಾಗ ಘಟನೆ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಮಾಡಲಾಗಿದೆ.

Video Top Stories