ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚಿದ ಕಳ್ಳರ ಹಾವಳಿ: ಎಟಿಎಂನಲ್ಲಿದ್ದ 24 ಲಕ್ಷ ಕದ್ದ ಖದೀಮರು

ಐಸಿಐಸಿಐ ಬ್ಯಾಂಕ್‌ನ ಎಟಿಎಂನಲ್ಲಿ ಕಳ್ಳತನವಾಗಿದ್ದು, ಕಳ್ಳರು ಸುಮಾರು 24 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ.
 

First Published Jul 14, 2023, 11:05 AM IST | Last Updated Jul 14, 2023, 11:05 AM IST

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಇತ್ತೀಚೆಗೆ ಕಳ್ಳರ ಹಾವಳಿ ಹೆಚ್ಚಾಗಿದೆ. ಕಳ್ಳರು ಎಟಿಎಂನಲ್ಲಿನ(ATM) ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಎಟಿಎಂನಲ್ಲಿದ್ದ ಸುಮಾರು 24 ಲಕ್ಷ ರೂಪಾಯಿ ಹಣವನ್ನು ಕದ್ದಿದ್ದಾರೆ. ಇತ್ತೀಚೆಗೆ ಕಳ್ಳರು ಎಟಿಎಂಗಳನ್ನು ಟಾರ್ಗೆಟ್‌ ಮಾಡಿ ಕಳ್ಳತನ(Theft) ಮಾಡುತ್ತಿದ್ದಾರೆ. ಪರಪ್ಪನ ಅಗ್ರಹಾರದ ಕೆ.ಆರ್‌.ನಗರ ರಸ್ತೆಯಲ್ಲಿರುವ ಎಟಿಎಂನಲ್ಲಿ ಕಳ್ಳತನವಾಗಿದೆ. ಎಟಿಎಂನ ಸೇಫ್ಟಿ ಡೋರ್ (ATM Safety Door) ಓಪನ್ ಮಾಡಿ ಕಳ್ಳರು ತಮ್ಮ ಕರಾಮತ್ತು ತೋರಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ (Parappana Agrahara Police Station) ವ್ಯಾಪ್ತಿಯಲ್ಲಿ ನಡೆದಿದೆ. ಕೆ.ಆರ್ ನಗರ (KR Nagar) ರಸ್ತೆಯಲ್ಲಿರುವ ಐಸಿಐಸಿಐ ಬ್ಯಾಂಕ್(ICICI bank) ಎಟಿಎಂನಲ್ಲಿ ಈ ಘಟನೆ ನಡೆದಿದೆ. ಜುಲೈ 6 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 

ಇದನ್ನೂ ವೀಕ್ಷಿಸಿ:  ಅನ್ನಭಾಗ್ಯ ಫಲಾನುಭವಿಗಳ ಖಾತೆಗ ಹಣ ವರ್ಗಾವಣೆ: ಜುಲೈ ಅಂತ್ಯದೊಳಗೆ ಎಲ್ಲಾರಿಗೂ ಮನಿ

Video Top Stories