ಬೀದರ್‌ನಲ್ಲಿ ಎಟಿಎಂ ಸಿಬ್ಬಂದಿ ಮೇಲೆ ದಾಳಿ, ಲಕ್ಷ ಲಕ್ಷ ರೂಪಾಯಿ ದರೋಡೆ: ಇಬ್ಬರು ಸಾವು

ಇಲ್ಲಿನ ಶಿವಾಜಿ ಚೌಕ್‌ನಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಎಟಿಎಂಗಳಿಗೆ ಹಣ ಹಾಕುವ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 
 

First Published Jan 16, 2025, 11:13 PM IST | Last Updated Jan 16, 2025, 11:13 PM IST

ಬೀದರ್ (ಜ.16): ಇಲ್ಲಿನ ಶಿವಾಜಿ ಚೌಕ್‌ನಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಎಟಿಎಂಗಳಿಗೆ ಹಣ ಹಾಕುವ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಹೌದು! ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಎಟಿಎಂಗೆ ಹಣ ಹಾಕುವ ಸಿಬ್ಬಂದಿಗಳ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದು, ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಗಿರಿ ವೆಂಕಟೇಶ್ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಎಟಿಎಂಗೆ ಹಣ ಹಾಕಲು ಸಿಬ್ಬಂದಿಗಳು ವಾಹನದಿಂದ ಹಣದ ಪೆಟ್ಟಿಗೆ ಹೊರ ತೆಗೆಯುತ್ತಿದ್ದಂತೆಯೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ 83 ಲಕ್ಷ ರೂಪಾಯಿಗಳಿದ್ದ ಹಣದ ಪೆಟ್ಟಿಗೆಯನ್ನು ಬೈಕ್‌ನಲ್ಲಿ ತೆಗೆದುಕೊಂಡು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಹೆಲ್ಮೆಟ್ ಧರಿಸಿದ್ದು, ಈ ಕೃತ್ಯದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಸುದ್ದಿ ತಿಳಿದು ಎಸ್‌ಪಿ ಪ್ರದೀಪ್ ಗುಮಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

Video Top Stories