Asianet Suvarna News Asianet Suvarna News

ಬೆಂಗಳೂರು ಫ್ಯಾಕ್ಟರಿಯಲ್ಲಿ ಸ್ಫೋಟ..ಇಬ್ಬರು  ಕಾರ್ಮಿಕರ ದುರ್ಮರಣ

* ಮಾಗಡಿ ರಸ್ತೆಯ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ
* ಮಾಲೀಕರ ಮೇಲೆ ಪ್ರಕರಣ ದಾಖಲು
* ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
* ಸೋಮವಾರ ಮಧ್ಯಾಹ್ನ ನಡೆದ ಸ್ಫೋಟ

ಬೆಂಗಳೂರು(ಆ. 23)   ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಎಂಎಂ ಫುಡ್‌ ಫ್ಯಾಕ್ಟರಿಯಲ್ಲಿ ಬಾಯ್ಲರ್‌ ಸ್ಫೋಟ ಸಂಭವಿಸಿ  ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಮಾಗಡಿ ರಸ್ತೆಯಲ್ಲಿರುವ ಅಂಜನ್‌ ಚಿತ್ರಮಂದಿರ ಬಳಿ ಮಧ್ಯಾಹ್ನ 1.50ರ ಸುಮಾರಿಗೆ ಸ್ಫೋಟ ನಡೆದಿದೆ. ಬಾಯ್ಲರ್‌ ಸ್ಫೋಟಗೊಂಡ ವೇಳೆ ಎಂಎಂ ಫುಡ್‌ ಫ್ಯಾಕ್ಟರಿಯಲ್ಲಿ 7 ಜನ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ವಿಜಯನಗರದ ನಿಗೂಢ ಸ್ಫೋಟದ ಹಿಂದೆ ಏನಿತ್ತು?

ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬೆಂಗಳೂರು ಪಶ್ಚಿಮ ಡಿಸಿಪಿ ಸಂಜೀವ್‌ ಪಾಟೀಲ್‌ ಮಾಹಿತಿ ನೀಡಿದ್ದಾರೆ. ಇನ್ನು, ಸ್ಫೋಟದ ತೀವ್ರತೆ ಫ್ಯಾಕ್ಟರಿ ಪಕ್ಕದಲ್ಲಿದ್ದ ಮನೆಯವರಿಗೂ ತಟ್ಟಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.  ಅಗ್ನಿಶಾಮಕ ದಳದ ಸಿಬ್ಬಂದಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.ಘಟನೆಗೆ ಸಂಬಂಧಿಸಿ ಕಟ್ಟಡದ ಮಾಲೀಕ  ನರೇಂದ್ರ.. ಫ್ಯಾಕ್ಟರಿ ಮಾಲೀಕರಾ ವಿಜಯ್ ಮೆಹ್ತಾ ಹಾಗೂ ಸಚಿನ್ ಮೇಲೆ  ನಿರ್ಲಕ್ಷ್ಯತನ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Video Top Stories