ಉಡುಪಿ ವಿಡಿಯೋ ವಿವಾದ: ತನಿಖೆಯಲ್ಲೂ ಹೇಳಿಕೆಗೆ ಬದ್ಧವಾಗಿರುವ ಮುಸ್ಲಿಂ ವಿದ್ಯಾರ್ಥಿನಿಯರು !
ಉಡುಪಿ ವಿಡಿಯೋ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಂ ವಿದ್ಯಾರ್ಥಿನಿಯರು ತಪ್ಪನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೇ ವಿಡಿಯೋ ಮಾಡಿ, ಡಿಲೀಟ್ ಮಾಡಿರುವುದಾಗಿ ಹೇಳಿದ್ದಾರೆ.
ಉಡುಪಿ: ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ವಿವಾದ(udupi video case) ಪ್ರಕರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದು, ಈ ವೇಳೆ ಮಹತ್ವದ ಅಂಶ ಬೆಳಕಿಗೆ ಬಂದಿದೆ. ವಿಚಾರಣೆ ವೇಳೆ ಮುಸ್ಲಿಂ ವಿದ್ಯಾರ್ಥಿನಿಯರು(muslim students) ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದ ತಿಳಿದುಬಂದಿದೆ. ಪೊಲೀಸರು ಮೂವರು ವಿದ್ಯಾರ್ಥಿನಿಯರ ವಿಚಾರಣೆ ನಡೆಸಿದ್ದು, ಈ ವೇಳೆ ಅವರು ಅವರ ಹೇಳಿಕೆಗೆ ಬದ್ಧವಾಗಿದ್ದಾರೆ. ಅಲ್ಲದೇ ತಮಾಷೆಗಾಗಿ ವಿಡಿಯೋ ಮಾಡಿದ್ದು, ಬಳಿಕ ಡಿಲೀಟ್ ಕೂಡ ಮಾಡಿದ್ದೇವೆ ಎಂದ ಹೇಳಿದ್ದಾರೆ. ಇನ್ನೂ ಗುಪ್ತಚರ ಇಲಾಖೆ ಅಧಿಕಾರಿಗಳು ಸಹ ಕಾಲೇಜಿಗೆ ಭೇಟಿ ನೀಡಿದ್ದಾರೆ. ಇನ್‌ಸ್ಪೆಕ್ಟರ್ ಹಂತದ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ ನಡೆಸಲಾಗಿದೆ. ಮಾಹಿತಿ ಸಂಗ್ರಹಿಸಿ ಅಧಿಕಾರಿಗಳು ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಇದನ್ನೂ ವೀಕ್ಷಿಸಿ: ಚೆನ್ನೈ-ಬೆಂಗಳೂರು ಹೈವೇ ಕಾಮಗಾರಿಗೆ ಭೂಮಿ ಸ್ವಾಧೀನ: ಸಿಗದ ಪರಿಹಾರ, ವಿಷ ಸೇವಿಸಿದ ಅನ್ನದಾತ