ಉಡುಪಿ ನಾಲ್ಕು ಕೊಲೆ ಪ್ರಕರಣ: ನರಹಂತಕ ಪ್ರವೀಣ್‌ ಚೌಗಲೆ ಖೆಡ್ಡಾಗೆ ಬಿದ್ದಿದ್ದು ಹೀಗೆ!

ಇಲ್ಲಿನ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರ ಸಾಂಗ್ಲಿ ಮೂಲದ ಪ್ರವೀಣ್​​​​ ಅರುಣ್​​​ ಚೌಗಲೆ ಬಂಧಿತ ಆರೋಪಿಯಾಗಿದ್ದು, ಉಡುಪಿಯಲ್ಲಿ ಕೊಲೆ ಮಾಡಿ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಸಂಬಂಧಿ ಮನೆಯಲ್ಲಿ ಅಡಗಿ ಕುಳಿತಿದ್ದನು.

First Published Nov 15, 2023, 12:54 PM IST | Last Updated Nov 15, 2023, 12:54 PM IST

ಉಡುಪಿ (ನ.15): ಇಲ್ಲಿನ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರ ಸಾಂಗ್ಲಿ ಮೂಲದ ಪ್ರವೀಣ್​​​​ ಅರುಣ್​​​ ಚೌಗಲೆ ಬಂಧಿತ ಆರೋಪಿಯಾಗಿದ್ದು, ಉಡುಪಿಯಲ್ಲಿ ಕೊಲೆ ಮಾಡಿ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಸಂಬಂಧಿ ಮನೆಯಲ್ಲಿ ಅಡಗಿ ಕುಳಿತಿದ್ದನು. ಆತನ ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಉಡುಪಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಪ್ರವೀಣ್‌ ಅರುಣ್‌  CISF ಸಿಬ್ಬಂದಿಯಾಗಿದ್ದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸೆಕ್ಯುರಿಟಿಯಾಗಿ ಕೆಲಸ ಮಾಡುತ್ತಿದ್ದರು. ಇನ್ನು ಗಗನಸಖಿಯಾಗಿ ಕೆಲಸ ಮಾಡುತ್ತಿದ್ದ ಅಯ್ನಾಜ್ ಗೆ ಪ್ರವೀಣ್ ಪರಿಚಯವಾಗಿತ್ತು. ಇಬ್ಬರು ಪರಸ್ಪರ ಆತ್ಮೀಯವಾಗಿದ್ದರು. ಆದರೆ ನಂತರ ಅಯ್ನಾಜ್ ಆತನಿಂದ ದೂರವಾಗಿದ್ದಳು. ಇದರಿಂದ ಕುಪಿತನಾಗಿದ್ದ ಪ್ರವೀಣ್ ಆಕೆಯನ್ನು ಕೊಲೆ ಮಾಡುವ ನಿರ್ಧಾರ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

Video Top Stories