Belagavi Crime: ಪ್ರಿಯಕರನ ಜತೆ ಸೇರಿ ಪತಿಯನ್ನೇ ಕೊಂದ ಕಿರಾತಕಿ ಪತ್ನಿ..!

ಮದುವೆಯಾಗಿದ್ದರೂ ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಪ್ರಿಯಕರನೊಂದಿಗೆ ಸೇರಿಕೊಂಡು ಪತಿಯನ್ನೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದದೆ. ಕುಂದಾನಗರಿ ಬೆಳಗಾವಿಯಲ್ಲಿ ಈ ಘಟನೆ ಕೇಳಿಬಂದಿದ್ದು, ಈ ಬಗ್ಗೆ ಇಲ್ಲಿದೆ ವಿವರ..

First Published Sep 25, 2022, 3:21 PM IST | Last Updated Sep 25, 2022, 3:21 PM IST

ಕುಂದಾನಗರಿ ಬೆಳಗಾವಿಯಲ್ಲಿ ಅನೈತಿಕ ಸಂಬಂಧಕ್ಕೆ ಪತಿ ಕೊಲೆಯಾಗಿದ್ದು, ಪತಿಯನ್ನು ಪತ್ನಿಯೇ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಿಯಕರನ ಜೊತೆ ಸೇರಿ ಪತ್ನಿ ಕೊಲೆ ಮಾಡಿದ್ದು, ಕೊಲೆಯಾಗಿರುವವನನ್ನು ಪಾಂಡಪ್ಪ ಜಟಕನ್ನವರ್ ಎಂದು ಗುರುತಿಸಲಾಗಿದೆ. ಲಕ್ಷ್ಮೀ ತನ್ನ ಪತಿಯನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದ್ದು, ಈ ಹಿನ್ನೆಲೆ ಕೊಲೆ ಮಾಡಿದ ಆರೋಪದ ಮೇಲೆ ಪ್ರಿಯಕರ ರಮೇಶ್‌ ಬಡಿಗೇರ್‌ ಅವರನ್ನು ಸಹ ಬಂಧಿಸಲಾಗಿದೆ. ಅನೈತಿಕ ಸಂಬಂಧ ಕೊಲೆಗೆ ಕಾರಣ ಎಂದು ತಿಳಿದುಬಂದಿದ್ದು, ಕೊಲೆ ಮಾಡಿ ಅಪಘಾತದಂತೆ ಬಿಂಬಿಸಿದ್ರು. ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಲಾಗಿದ್ದು, ಈ ಸಂಬಂಧ ಕಳಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

Video Top Stories