ಗಾಳಿಯಲ್ಲಿ ಗುಂಡು ಹಾರಿಸಿ ಸಚಿವ ಭಗವಂತ ಖೂಬಾಗೆ ಸ್ವಾಗತ, ಕೇಸ್ ಬುಕ್

ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಗತಿಸಿರುವ ಪ್ರಸಂಗ ನಡೆದಿದ್ದು, ಇದು ಭಾರೀ ವಿವಾದಕ್ಕೆ ಕಾರಣವಾಗಿದೆ.

Share this Video
  • FB
  • Linkdin
  • Whatsapp

ಯಾದಗಿರಿ, (ಆ.18): ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಗತಿಸಿರುವ ಪ್ರಸಂಗ ನಡೆದಿದ್ದು, ಇದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಬಿಜೆಪಿ ಯಾತ್ರೆಯಲ್ಲಿ ಗುಂಡಿನ ಸದ್ದು.. ಗೃಹ ಸಚಿವರಿಗೆ ಹೆಚ್ಚಿನ ಮಾಹಿತಿ ಇಲ್ಲ!

ಜಿಲ್ಲೆಯ ಗಡಿ ಗ್ರಾಮ ಯರಗೋಳದಲ್ಲಿ ಬಿಜೆಪಿ ಜನಾರ್ಶೀವಾದ ಯಾತ್ರೆ ಅಂಗವಾಗಿ‌ ಸಚಿವರು ಜಿಲ್ಲೆಗೆ ಪ್ರವೇಶಿಸುವ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ನಡೆದಿದೆ. ಈ ಸುದ್ದಿಯನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ಪ್ರಸಾರ ಮಾಡುತ್ತಿದ್ದಂತೆಯೇ ಎಚ್ಚೆತ್ತ ಎಸ್ಪಿ, ಕೇಸ್ ಬುಕ್ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ಅದರಂತೆ ಇದೀಗ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Related Video