Asianet Suvarna News Asianet Suvarna News

ಮೈಸೂರು: ಯುವ ಬ್ರಿಗೇಡ್‌ ಕಾರ್ಯಕರ್ತ ವೇಣುಗೋಪಾಲ್‌ ನಾಯ್ಕ್‌ ಕೊಲೆ

ಮೈಸೂರಿನ ಟಿ. ನರಸೀಪುರ ಪಟ್ಟಣದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ವೇಣುಗೋಪಾಲ್‌ ನಾಯ್ಕ್‌ ಎಂಬ ಯುವಕನನ್ನು ಕೊಲೆ ಮಾಡಲಾಗಿದೆ.
 

ಮೈಸೂರು: ಜಿಲ್ಲೆಯಲ್ಲಿ ಯುವ ಬ್ರಿಗೇಡ್‌ ಕಾರ್ಯಕರ್ತನ(yuva brigade activist) ಹತ್ಯೆ(Murder) ಮಾಡಲಾಗಿದೆ. ಟಿ.ನರಸೀಪುರ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಇದನ್ನೇ ಮನದಲ್ಲಿ ಇಟ್ಟುಕೊಂಡು ಬಾಟಲಿಯಿಂದ ಇರಿದು ಕೊಲೆ ಮಾಡಲಾಗಿದೆ. ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್‌ ನಾಯ್ಕ್‌ (32)(Venugopal Naik) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಟಿ.ನರಸೀಪುರ(T Narasipur) ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆ ಪೊಲೀಸರು ಬಲೆ ಬೀಸಿದ್ದಾರೆ. ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿದ್ದು, ವೇಣುಗೋಪಾಲ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಎಮ್ಮೆ ಬೆನ್ನೇರಿದ RJD ಕಾರ್ಯಕರ್ತ ಕೇದಾರ್..!: ಇದರ ರಿಯಾಕ್ಷನ್ ನೋಡಿ ಎಲ್ಲ ಶಾಕೋ ಶಾಕು..!

Video Top Stories